ADVERTISEMENT

ಬೀದರ್: ಕೊಳವೆಬಾವಿ ತೆರವು ನಿಷೇಧ ವಾಪಸ್

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2021, 14:05 IST
Last Updated 11 ಮಾರ್ಚ್ 2021, 14:05 IST
ರಹೀಂ ಖಾನ್‌
ರಹೀಂ ಖಾನ್‌   

ಬೀದರ್: ಜಿಲ್ಲೆಯಲ್ಲಿ ಹೊಸ ಕೊಳವೆಬಾವಿ ಕೊರೆಸಲು ವಿಧಿಸಿದ್ದ ನಿಷೇಧವನ್ನು ಜಿಲ್ಲಾಡಳಿತ ತೆರವುಗೊಳಿಸಿದೆ.

ನಗರದಲ್ಲಿ ಫೆಬ್ರುವರಿ 23 ರಂದು ನಡೆದಿದ್ದ ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಹೊಸ ಕೊಳವೆಬಾವಿ ಕೊರೆಯಲು ಅನುಮತಿ ನೀಡಬೇಕು ಎಂದು ಶಾಸಕ ರಹೀಂ ಖಾನ್ ಒತ್ತಾಯಿಸಿದ್ದರು. ಜಿಲ್ಲೆಯ ಇತರ ಶಾಸಕರು ಅದಕ್ಕೆ ಸಹಮತ ವ್ಯಕ್ತಪಡಿಸಿದ್ದರು.

ಇದೀಗ ಜಿಲ್ಲಾ ಆಡಳಿತವು ಗುರುನಾನಕ್ ಝೀರಾ, ನರಸಿಂಹ ಝರಣಾ, ಪಾಪನಾಶ ಕೆರೆಯ 0.5 ಕಿ.ಮೀ. ವ್ಯಾಪ್ತಿಯಲ್ಲಿ ಕೊಳವೆಬಾವಿ ಕೊರೆಸಬಾರದು ಎನ್ನುವುದು ಸೇರಿದಂತೆ ಕೆಲ ಷರತ್ತುಗಳನ್ನು ವಿಧಿಸಿ ಹೊಸ ಕೊಳವೆಬಾವಿ ಕೊರೆಯಲು ಅನುಮತಿ ಕೊಟ್ಟಿದೆ.

ADVERTISEMENT

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ ರಹೀಂ ಖಾನ್ ಅವರು, ಕೊಳವೆಬಾವಿ ನಿಷೇಧ ವಿಷಯ ಪ್ರಸ್ತಾಪಿಸಿದ್ದರು. ಜಿಲ್ಲೆಯಲ್ಲಿ ಕೊಳವೆಬಾವಿ ಕೊರೆಯುವುದನ್ನು ನಿಷೇಧಿಸಿದರೂ ಕೆಲ ಶ್ರೀಮಂತರು ಅಕ್ರಮವಾಗಿ ಕೊಳವೆಬಾವಿ ಕೊರೆಸುತ್ತಿದ್ದಾರೆ. ನಿಷೇಧ ಆದೇಶದಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ ಎಂದು ಗಮನ ಸೆಳೆದಿದ್ದರು.

ನಿಷೇಧ ಆದೇಶ ರದ್ದುಪಡಿಸಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಬೇಡಿಕೆ ಮಂಡಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವರು ನಿಷೇಧ ತೆರವಿಗೆ ಜಿಲ್ಲಾ ಆಡಳಿತಕ್ಕೆ ಸೂಚನೆ ನೀಡಿದ್ದರು. ಕೊಳವೆಬಾವಿ ನಿಷೇಧ ತೆರವಿಗೆ ಪ್ರಯತ್ನಿಸಿದ ರಹೀಂಖಾನ್ ಕಾರ್ಯಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.