ADVERTISEMENT

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2022, 16:11 IST
Last Updated 27 ನವೆಂಬರ್ 2022, 16:11 IST
ಹುಮನಾಬಾದ್ ತಾಲ್ಲೂಕಿನ ಘಾಟಬೋರಳ ಗ್ರಾಮಕ್ಕೆ ಬಿಜೆಪಿ ಮುಖಂಡ ಡಾ.ಸಿದ್ದು ಪಾಟೀಲ, ಬಿಎಸ್‌ಪಿ ಮುಖಂಡ ಅಂಕುಶ್ ಗೋಖಲೆ ಭೇಟಿ ನೀಡಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು
ಹುಮನಾಬಾದ್ ತಾಲ್ಲೂಕಿನ ಘಾಟಬೋರಳ ಗ್ರಾಮಕ್ಕೆ ಬಿಜೆಪಿ ಮುಖಂಡ ಡಾ.ಸಿದ್ದು ಪಾಟೀಲ, ಬಿಎಸ್‌ಪಿ ಮುಖಂಡ ಅಂಕುಶ್ ಗೋಖಲೆ ಭೇಟಿ ನೀಡಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು   

ಹುಮನಾಬಾದ್: ತಾಲ್ಲೂಕಿನ ಘಾಟಬೋರಳ ಗ್ರಾಮದ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಭಾವಚಿತ್ರಕ್ಕೆ ದುಷ್ಕರ್ಮಿಗಳು ಸಗಣಿ ಎಸೆದ ಘಟನೆ ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ದಲಿತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ತಹಶೀಲ್ದಾರ್ ಭೇಟಿ: ತಹಶೀಲ್ದಾರ್ ಡಾ.ಪ್ರದೀಪ್ ಕುಮಾರ್ ಹಿರೇಮಠ ಅಧಿಕಾರಿಗಳ ತಂಡದೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿ,‘ಗ್ರಾಮದವರೇ ಈ ಕೃತ್ಯ ಎಸಗಿರಬಹುದು ಎನ್ನುವ ಅನುಮಾನ ಇದೆ. ತನಿಖೆ ನಡೆಸಲಾಗುವುದು’ ಎಂದರು.

ADVERTISEMENT

ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ, ಭೀಮರಾವ್ ಪಾಟೀಲ ಭೇಟಿ ನೀಡಿದರು. ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಮುಖಂಡ ಸಿದ್ದು ಪಾಟೀಲ ಹಾಗೂ ಬಿಎಸ್‌ಪಿ ಮುಖಂಡ ಅಂಕುಶ್ ಗೋಖಲೆ ಸಹ ಭೇಟಿ ನೀಡಿದರು. ಜನರೊಂದಿಗೆ ಚರ್ಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.