ADVERTISEMENT

ಬೀದರ್‌: ಸಂವಿಧಾನ ಶಿಲ್ಪಿಗೆ ಗೌರವ ನಮನ

ಸಮತಾ ಸೈನಿಕ ದಳದಿಂದ ಆಕರ್ಷಕ ಪಥ ಸಂಚಲನ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2018, 12:28 IST
Last Updated 6 ಡಿಸೆಂಬರ್ 2018, 12:28 IST
ಬೀದರ್‌ನಲ್ಲಿ ಗುರುವಾರ ಡಾ.ಅಂಬೇಡ್ಕರ್‌ ಪ್ರತಿಮೆಗೆ ಪುಷ್ಪಾರ್ಪಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ
ಬೀದರ್‌ನಲ್ಲಿ ಗುರುವಾರ ಡಾ.ಅಂಬೇಡ್ಕರ್‌ ಪ್ರತಿಮೆಗೆ ಪುಷ್ಪಾರ್ಪಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ   

ಬೀದರ್‌: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಪರಿನಿರ್ವಾಣ ದಿನದ ಅಂಗವಾಗಿ ನಗರದಲ್ಲಿ ಗುರುವಾರ ಸಮತಾ ಸೈನಿಕ ದಳ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಹಾಗೂ ದಲಿತರು ಬಾಬಾಸಾಹೇಬ ಅಂಬೇಡ್ಕರ್‌ ಪ್ರತಿಮೆಗೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ನಗರದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಮಾಡುತ್ತಿರುವ ದಲಿತ ವಿದ್ಯಾರ್ಥಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದ ವಿದ್ಯಾರ್ಥಿಗಳು ಸರತಿಸಾಲಿನಲ್ಲಿ ಬಂದು ಪ್ರತಿಮೆಗೆ ಪುಷ್ಪ ಸಮರ್ಪಣೆ ಮಾಡಿದರು.

ಭಾರತೀಯ ಬೌದ್ಧ ಮಹಾಸಭಾದ ನೇತೃತ್ವದಲ್ಲಿ ಸಮತಾ ಸೈನಿಕ ದಳದ ಕಾರ್ಯಕರ್ತರು ನೀಲಿ ಟೊಪ್ಪಿಗೆ, ಬಿಳಿ ಶರ್ಟ್ ಹಾಗೂ ಖಾಕಿ ಪ್ಯಾಂಟ್, ಮಹಿಳೆಯರು ಶ್ವೇತ ವರ್ಣದ ಸೀರೆ ತೊಟ್ಟು ಜನವಾಡ ರಸ್ತೆಯಲ್ಲಿರುವ ಬೌದ್ಧ ವಿಹಾರದಿಂದ ಡಾ.ಅಂಬೇಡ್ಕರ್‌ ವೃತ್ತದ ವರೆಗೆ ಮೆರವಣಿಗೆಯಲ್ಲಿ ಬಂದರು. ನಂತರ ಪ್ರತಿಮೆ ಸಮ್ಮುಖದಲ್ಲಿ ಪಥಸಂಚಲನ ನಡೆಸಿ ಗೌರವ ವಂದನೆ ಸಲ್ಲಿಸಿದರು.

ADVERTISEMENT

ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪುರ ಅವರು ಡಾ.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾರತಬಾಯಿ ಶೇರಿಕಾರ, ಸಂಸದ ಭಗವಂತ ಖೂಬಾ, ಜಿಲ್ಲಾಧಿಕಾರಿ ಎಚ್‌.ಆರ್.ಮಹಾದೇವ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಶ್ರೀಧರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಹಾಂತೇಶ ಬೀಳಗಿ, ಪ್ರಮುಖರಾದ ಅನಿಲ ಬೆಲ್ದಾರ್, ರಾಜು ಕಡ್ಯಾಳ್, ಎಂ.ಪಿ.ಮುದಾಳೆ, ಕಲ್ಯಾಣರಾವ್‌ ಭೋಸ್ಲೆ, ಬಾಬು ಪಾಸ್ವಾನ್, ಸುಬ್ಬಣ್ಣ ಕರಕನಳ್ಳಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.