ಬೀದರ್: ಚಿತ್ತಾಪುರ ತಾಲ್ಲೂಕಿನ ಶಹಾಬಾದ್ ಹತ್ತಿರದ ಮುತಗಾ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಪ್ರತಿಮೆ ವಿರೂಪಗೊಳಿಸಿರುವುದನ್ನು ಜಿಲ್ಲಾ ಟೋಕರೆ ಕೋಲಿ ಸಮಾಜ ಸಂಘ ಖಂಡಿಸಿದ್ದು, ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದೆ.
ಸಂಘದ ಪದಾಧಿಕಾರಿಗಳು ನಗರದಲ್ಲಿ ಸೋಮವಾರ ಮುಖ್ಯಮಂತ್ರಿ ಹೆಸರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿಗೆ ಸಲ್ಲಿಸಿ ಒತ್ತಾಯಿಸಿದರು.
ನಿಜಶರಣ ಅಂಬಿಗರ ಚೌಡಯ್ಯನವರ ಪ್ರತಿಮೆ ವಿರೂಪಗೊಳಿಸಿರುವುದು ಬಸವಾದಿ ಶರಣರಿಗೆ ಮಾಡಿದ ದೊಡ್ಡ ಅವಮಾನ ಎಂದು ತಿಳಿಸಿದ್ದಾರೆ.
ಸಂಘದ ಅಧ್ಯಕ್ಷ ಜಗನಾಥ ಜಮಾದಾರ, ಪ್ರಧಾನ ಕಾರ್ಯದರ್ಶಿ ಮಾರುತಿ ಮಾಸ್ಟರ್, ಸಂಘಟನಾ ಕಾರ್ಯದರ್ಶಿ ವಿಜಯಕುಮಾರ ಪಾಟೀಲ, ಮುಖಂಡರಾದ ನಂದಕುಮಾರ ಜಂಬಗಿಕರ, ಸನ್ಮುಕಪ್ಪ ವಾಲೀಕರ, ಬಾಬುರಾವ್ ತಾಳಮಡಗಿ, ಲಾಲಪ್ಪ ಮಂಗಲಗಿ, ಸಂಜುಕುಮಾರ ಸಿರ್ಸೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.