ADVERTISEMENT

ಮತಾಂತರ ಮಸೂದೆ: ದಿಟ್ಟ ಹೆಜ್ಜೆ ಇಟ್ಟ ಸರ್ಕಾರ- ಸಚಿವ ಭಗವಂತ ಖೂಬಾ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2021, 15:57 IST
Last Updated 21 ಡಿಸೆಂಬರ್ 2021, 15:57 IST
ಭಗವಂತ ಖೂಬಾ
ಭಗವಂತ ಖೂಬಾ   

ಬೀದರ್: ವಿಧಾನಮಂಡಲ ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ಮಂಡಿಸುವ ಮೂಲಕ ರಾಜ್ಯ ಸರ್ಕಾರವು ಆಮಿಷ, ಬಲವಂತದಿಂದ ದೀನ ದಲಿತರು, ಆರ್ಥಿಕವಾಗಿ ಹಿಂದುಳಿದವರ ಮತಾಂತರದ ವಿರುದ್ಧ ದಿಟ್ಟ ಹೆಜ್ಜೆ ಇಟ್ಟಿದೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಪ್ರತಿಕ್ರಿಯಿಸಿದ್ದಾರೆ.

ಮತಾಂತರ ನಿಷೇಧ ಮಸೂದೆ ಯಾವುದೇ ಜಾತಿಯ ಪರ ಅಥವಾ ವಿರುದ್ಧ ಅಲ್ಲ. ಸಂವಿಧಾನದ ಆಶಯಕ್ಕೆ ಧಕ್ಕೆ ತರುವ ಕೆಲಸ ಮಾಡುವವರಿಗೆ, ಅನ್ಯಾಯದ ಮಾರ್ಗದಿಂದ ಮತಾಂತರ ಮಾಡುವವರಿಗೆ ತಕ್ಕ ಪಾಠ ಕಲಿಸುವ ಉದ್ದೇಶ ಇದರದ್ದಾಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ಸಿಗರು ಮತ ಬ್ಯಾಂಕ್ ರಾಜಕಾರಣಕ್ಕೆ ಮಣೆ ಹಾಕದೆ, ಸ್ವಸ್ಥ ಸಮಾಜದ ಹಿತ ಕಾಪಾಡಲು ಮಸೂದೆಯನ್ನು ಬೆಂಬಲಿಸಬೇಕು. ಒಳ್ಳೆಯ ಮಸೂದೆಯನ್ನು ವಿರೋಧಿಸುವ ಮೂಲಕ ಒಂದು ಕೋಮಿನ ಜನರನ್ನು ಎತ್ತಿ ಹಿಡಿಯುವ, ಇನ್ನೊಂದು ಧರ್ಮದವರನ್ನು ಬೇರೆ ರೀತಿಯಲ್ಲಿ ನೋಡುವ ಅವಕಾಶ ನೀಡಬಾರದು. ಆ ಪಕ್ಷದ ನಾಯಕರು ಮಸೂದೆಯನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.