ADVERTISEMENT

ಅನುಭವ ಮಂಟಪ, ಕಲಬುರ್ಗಿ ಪ್ರಶಸ್ತಿಗೆ ಅಯ್ಕೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2020, 19:10 IST
Last Updated 22 ನವೆಂಬರ್ 2020, 19:10 IST
ಅರವಿಂದ ಜತ್ತಿ
ಅರವಿಂದ ಜತ್ತಿ   

ಬಸವಕಲ್ಯಾಣ (ಬೀದರ್‌ ಜಿಲ್ಲೆ): ಇಲ್ಲಿಯ ವಿಶ್ವ ಬಸವಧರ್ಮ ವಿಶ್ವಸ್ಥ ಮಂಡಳಿಯ ‘ಅನುಭವ ಮಂಟಪ ಪ್ರಶಸ್ತಿ’ಗೆ ಬೆಂಗಳೂರು ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಹಾಗೂ‘ಡಾ.ಎಂ.ಎಂ. ಕಲಬುರ್ಗಿ ರಾಷ್ಟ್ರೀಯ ಸಂಶೋಧನಾ ಪ್ರಶಸ್ತಿ’ಗೆ ಚಿಕ್ಕಮಗಳೂರಿನ ಡಾ.ಎನ್.ಜಿ. ಮಹಾದೇವಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಪ್ರಶಸ್ತಿಗಳು ತಲಾ ₹50 ಸಾವಿರ ನಗದು ಬಹುಮಾನ ಹಾಗೂ ಫಲಕ ಒಳಗೊಂಡಿವೆ. ನವೆಂಬರ್ 28 ಮತ್ತು 29 ರಂದು ಇಲ್ಲಿ ಹಮ್ಮಿಕೊಂಡಿರುವ ಅನುಭವ ಮಂಟಪ ಉತ್ಸವ ಹಾಗೂ ಶರಣ ಕಮ್ಮಟದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದುವಿಶ್ವ ಬಸವಧರ್ಮ ವಿಶ್ವಸ್ಥ ಮಂಡಳಿ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.

ಅರವಿಂದ ಜತ್ತಿ ಅವರು ಬಸವ ಸಮಿತಿ ಮೂಲಕ ಬಸವ ತತ್ವದ ಪ್ರಚಾರ, ಪ್ರಸಾರದಲ್ಲಿ ಮಹತ್ವದ ಕಾರ್ಯ ನಿರ್ವಹಿಸಿದ್ದಾರೆ. ವಚನ ಸಂಪುಟಗಳನ್ನು ವಿವಿಧ ಭಾಷೆಗಳಲ್ಲಿ ಪ್ರಕಟಿಸಿದ್ದಾರೆ.ಪ್ರಾಧ್ಯಾಪಕ ಡಾ.ಎನ್.ಜಿ. ಮಹಾದೇವಪ್ಪ ಅವರು ಲಿಂಗಾಯತ ತತ್ವಜ್ಞಾನಕ್ಕೆ ಸಂಬಂಧಿಸಿದ 27 ಪುಸ್ತಕಗಳನ್ನು ಬರೆದಿದ್ದಾರೆ. ಲಿಂಗಾಯತ ದರ್ಶನ ಮಾಸಪತ್ರಿಕೆಯ ಸಂಪಾದಕರಾಗಿದ್ದಾರೆ. ಈ ಸಾಧನೆ ಪರಿಗಣಿಸಿಪ್ರಶಸ್ತಿ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.