ADVERTISEMENT

ಅನುಭವ ಮಂಟಪ ₹742 ಕೋಟಿ ಪರಿಷ್ಕೃತ ಅಂದಾಜಿಗೆ ಸಚಿವ ಸಂಪುಟ ಅನುಮೋದನೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2025, 13:43 IST
Last Updated 19 ಜೂನ್ 2025, 13:43 IST
ಈಶ್ವರ ಬಿ. ಖಂಡ್ರೆ
ಈಶ್ವರ ಬಿ. ಖಂಡ್ರೆ   

ಬೀದರ್‌: ‘ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪದ ₹742 ಕೋಟಿ ಪರಿಷ್ಕೃತ ಅಂದಾಜಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ.

ಭೂ ವಿವಾದದಿಂದಾಗಿ ಅನುಭವ ಮಂಟಪಕ್ಕೆ ಆರಂಭದಲ್ಲಿ ನಿರ್ಧರಿಸಲಾಗಿದ್ದ ಸ್ಥಳದಲ್ಲಿ ಕಾಮಗಾರಿ ನಡೆಸಲಾಗದೆ, ಬೇರೆ ಸ್ಥಳದಲ್ಲಿ ಕಾಮಗಾರಿ ಮಾಡಬೇಕಾಗಿ ಬಂದ ಕಾರಣದಿಂದಾಗಿ ಹಾಗೂ ಜಿಎಸ್‌ಟಿ ಶೇ 18ಕ್ಕೆ ಏರಿಕೆ ಆದ ಕಾರಣ ಯೋಜನಾ ವೆಚ್ಚ ₹612 ಕೋಟಿ ಬದಲಾಗಿ ₹742 ಕೋಟಿಗೆ ಹೆಚ್ಚಳವಾಗಿದೆ. ಅದಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರಿಷ್ಕೃತ ಅಂದಾಜು ವೆಚ್ಚದಂತೆ ₹132 ಕೋಟಿ ಹೆಚ್ಚಳವಾಗಿದ್ದು, ಇದಕ್ಕೆ ಅನುಮೋದನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಎಲ್ಲ ಸಚಿವರಿಗೆ ಮತ್ತು ಭೂಮಿ ನೀಡಿದ ಕಂದಾಯ ಇಲಾಖೆಗೆ ಧನ್ಯವಾದ ಅರ್ಪಿಸಿದ್ದಾರೆ.

ADVERTISEMENT

2026ರ ವರ್ಷಾಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಿ ಮುಖ್ಯಮಂತ್ರಿಗಳ ಅಮೃತ ಹಸ್ತದಿಂದ ಉದ್ಘಾಟನೆ ಮಾಡಿಸಲು ಕಾಮಗಾರಿಗೆ ವೇಗ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.