ADVERTISEMENT

ರೈತರ ಹಿತಕ್ಕಾಗಿ ಎಪಿಎಂಸಿ ತಿದ್ದುಪಡಿ ಕಾಯ್ದೆ ಜಾರಿ

ಬಿಜೆಪಿ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಶಾಂತವೀರ ಕೇಶಕರ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2020, 14:31 IST
Last Updated 22 ಸೆಪ್ಟೆಂಬರ್ 2020, 14:31 IST
ಶಾಂತವೀರ ಕೇಶಕರ್
ಶಾಂತವೀರ ಕೇಶಕರ್   

ಬೀದರ್‌: ‘ರೈತರು ಹಾಗೂ ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡುವ ದಿಸೆಯಲ್ಲಿ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಆದರೆ ವಿರೋಧ ಪಕ್ಷಗಳು ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರುದ್ಧ ಅಪಪ್ರಚಾರ ಮಾಡುತ್ತಿವೆ’ ಎಂದು ಬಿಜೆಪಿ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಶಾಂತವೀರ ಕೇಶಕರ್ ಆರೋಪಿಸಿದರು.

'ರೈತರ ಹಿತವನ್ನು ಗಮನದಲ್ಲಿಕೊಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಎಪಿಎಂಸಿ ತಿದ್ದುಪಡಿ ಕಾಯ್ದೆಗೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಒಪ್ಪಿಗೆ ಪಡೆದಿದೆ. ಕಾಂಗ್ರೆಸ್‌ ಕೇವಲ ರಾಜಕೀಯ ಉದ್ದೇಶಕ್ಕೆ ವಿರೋಧಿಸುತ್ತಿರುವುದು ಸರಿಯಲ್ಲ’ ಎಂದು ನಗರದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

‘ವ್ಯಾಪಾರಿಗಳಿಂದ ರೈತರು ಶೋಷಣೆಗೆ ಒಳಗಾಗಬಾರದು ಹಾಗೂ ಬಹುರಾಷ್ಟ್ರೀಯ ಕಂಪನಿಗಳಿಂದಲೂ ರೈತರಿಗೆ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ರೈತರು ತಮಗೆ ಹೆಚ್ಚು ಬೆಲೆ ದೊರೆಯುವ ಕಡೆಗೆ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಬಹುದಾಗಿದೆ. ನೆರೆ ರಾಜ್ಯಗಳಿಗೂ ತೆರಳಿ ಉತ್ಪನ್ನಗಳನ್ನು ಮಾರಾಟ ಮಾಡಬಹುದಾಗಿದೆ’ ಎಂದು ತಿಳಿಸಿದರು.

ADVERTISEMENT

‘ರೈತರ ಆದಾಯವನ್ನು ಬರುವ ನಾಲ್ಕು ವರ್ಷಗಳಲ್ಲಿ ದುಪ್ಪಟ್ಟು ಮಾಡುವುದಕ್ಕೆ ಈ ಕಾಯ್ದೆ ಪೂರಕವಾಗಲಿದೆ. ಕೃಷಿ ಉತ್ಪನ್ನಗಳನ್ನು ರಫ್ತು ಮಾಡಲು ಅನುಕೂಲವಾಗಲಿದೆ’ ಎಂದು ಹೇಳಿದರು.

ಮುಖಂಡರಾದ ಬಸವರಾಜ ಜೋಜನಾ, ಶಿವಪುತ್ರ ವೈದ್ಯ, ಅರಿಹಂತ ಸಾವಳೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.