ADVERTISEMENT

ವಿದ್ಯಾರ್ಥಿ ವೇತನ ಮುಂದುವರಿಸಿ

ಕೇಂದ್ರ ಸರ್ಕಾರಕ್ಕೆ ಜಿಲ್ಲೆಯ ವಿವಿಧ ಸಂಘಟನೆಗಳ ಮನವಿ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2022, 5:36 IST
Last Updated 2 ಡಿಸೆಂಬರ್ 2022, 5:36 IST
1 ರಿಂದ 8 ನೇ ತರಗತಿಯ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ವಿದ್ಯಾರ್ಥಿ ವೇತನ ಮುಂದುವರಿಸಬೇಕು ಎಂದು ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು
1 ರಿಂದ 8 ನೇ ತರಗತಿಯ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ವಿದ್ಯಾರ್ಥಿ ವೇತನ ಮುಂದುವರಿಸಬೇಕು ಎಂದು ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು   

ಬೀದರ್‌: ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್‌ನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಯೋಜನೆಯಡಿ 1 ರಿಂದ 8 ನೇ ತರಗತಿಯ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ವಿದ್ಯಾರ್ಥಿ ವೇತನ ಮುಂದುವರಿಸಬೇಕು ಎಂದು ಜಿಲ್ಲೆಯ ವಿವಿಧ ದಲಿತ ಸಂಘಟನೆಗಳು ಒತ್ತಾಯಿಸಿವೆ.

ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಡಾ. ವೀರೇಂದ್ರಕುಮಾರ ಅವರಿಗೆ ಬರೆದ ಮನವಿಪತ್ರವನ್ನು ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಸಂದೀಪ ಕಾಂಟೆ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಸಲ್ಲಿಸಿದರು.

ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತರ ಶೇಕಡ 95ರಷ್ಟು ವಿಧ್ಯಾರ್ಥಿ ಗಳು ಆರ್ಥಿಕ ಸಮಸ್ಯೆಯಿಂದಾಗಿ ಸರ್ಕಾರಿ ಶಾಲೆಗಳಲ್ಲೇ ಓದುತ್ತಿದ್ದಾರೆ. ವಿದ್ಯಾರ್ಥಿ ವೇತನದ ಸಹಾಯದಿಂದ ಶಿಕ್ಷಣ ಮುಂದುವರಿಸಿದ್ದಾರೆ. ಕೇಂದ್ರ ಸರ್ಕಾರದ ನಿರ್ಧಾರ ತಳ ಸಮು ದಾಯದ ವಿದ್ಯಾರ್ಥಿಗಳಲ್ಲಿ ಆಘಾತ ಉಂಟು ಮಾಡಿದೆ ಎಂದು ಹೇಳಿದರು.

ADVERTISEMENT

ಕೇಂದ್ರ ಸರ್ಕಾರದ ಸುತ್ತೋಲೆಯು ಸಂವಿಧಾನದ ಮೂಲಭೂತ ಹಕ್ಕಾದ ಶಿಕ್ಷಣದ ಹಕ್ಕನ್ನು ದುರ್ಬಲಗೊಳಿಸುವ ಪ್ರಯತ್ನವಾಗಿದೆ. ಕೋವಿಡ್ ಅವಧಿಯಲ್ಲಿ ಬಡ ಕುಟುಂಬದ ಸಾವಿರಾರು ವಿದ್ಯಾರ್ಥಿಗಳು ತೊಂದರೆ ಅನುಭವಿಸಿದ್ದಾರೆ. ಕೆಲ ಮಕ್ಕಳು ಶಿಕ್ಷಣವನ್ನೇ ಅರ್ಧಕ್ಕೆ ನಿಲ್ಲಿಸಿದ್ದಾರೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ತಕ್ಷಣ ಆದೇಶ ಹಿಂದಕ್ಕೆ ಪಡೆಯಬೇಕು. ಬಡ ಕುಟುಂಬದ ಮಕ್ಕಳಿಗೆ ಆಗುತ್ತಿರುವ ಅನ್ಯಾಯ ತಡೆಯಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ರಾಜಕುಮಾರ ಮೂಲಭಾರತಿ, ದಲಿತ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಪತರಾವ್ ದೀನೆ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ವಕುಮಾರ ನೀಲಕಟ್ಟಿ ಸೇರಿ ದಲಿತ ಸಂಘಟನೆಗಳ ಮುಖಂಡರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.