ಹುಮನಾಬಾದ್: ‘ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವಸತಿ ಶಾಲೆಗಳ ನೌಕರರ ಸಂಘದ ವಿವಿಧ ಬೇಡಿಕೆ ಈಡೇರಿಸಬೇಕು’ ಎಂದು ಸಂಘದ ಜಿಲ್ಲಾ ಘಟಕದಿಂದ ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ನಂತರ ಸಂಘದ ಪ್ರಮುಖರು ಮಾತನಾಡಿ, ‘ನಮ್ಮ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ ಪಾಟೀಲ, ‘ನಿಮ್ಮ ಬೇಡಿಕೆಗಳು ನ್ಯಾಯಯುತವಾಗಿದ್ದು, ಸರ್ಕಾರದ ಮೇಲೆ ಒತ್ತಡ ಹೇರಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ’ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ದೇವಿದಾಸ ಜೋಶಿ, ಉಪಾಧ್ಯಕ್ಷ ಮಂಜುನಾಥ ಮಡಿವಾಳ, ವಿಭಾಗೀಯ ಕಾರ್ಯದರ್ಶಿ ಅನಿಲ ಕಾಂಬಳೆ, ವಿಭಾಗೀಯ ಸಂಘಟನಾ ಕಾರ್ಯದರ್ಶಿ ಶ್ರೀಮಂತ ಸಪಾಟೆ, ಸಂಘಟನಾ ಕಾರ್ಯದರ್ಶಿ ನಾರಾಯಣ ಹೊನ್ನಾಳೆ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.