ADVERTISEMENT

ಬೀದರ್: ಡಿ‍ಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 10 ಮೇ 2022, 13:45 IST
Last Updated 10 ಮೇ 2022, 13:45 IST

ಬೀದರ್: ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇಕಡ 35 ಅಂಕಗಳನ್ನು ಪಡೆದು ಪಾಸಾಗಿರುವ ಅಭ್ಯರ್ಥಿಗಳಿಂದ 2022-23ನೇ ಸಾಲಿನ ಡಿ‍ಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ತಾಂತ್ರಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.dte.kar.nic.inರಿಂದ ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಯನ್ನು ಬೀದರ್‌ನ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರಿಗೆ ಸಲ್ಲಿಸಬೇಕು. ಮೊದಲು ಬಂದವರಿಗೆ ಮೊದಲ ಆದ್ಯತೆ ಮೇರೆಗೆ ಪ್ರವೇಶ ಪಡೆದುಕೊಳ್ಳಬಹುದು.

ಸಿವಿಲ್ ಎಂಜಿನಿಯರಿಂಗ್, ಮೆಕ್ಯಾನಿಕಲ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್, ಆಟೊಮೊಬೈಲ್ ಎಂಜಿನಿಯರಿಂಗ್, ಕಮರ್ಷಿಯಲ್ ಪ್ರ್ಯಾಕ್ಟೀಸ್ (ಕನ್ನಡ ಮತ್ತು ಇಂಗ್ಲಿಷ್ ) ಜತೆಗೆ ಇದೇ ಶೈಕ್ಷಣಿಕ ವರ್ಷದಿಂದ ಹೊಸದಾಗಿ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ಪ್ರಾರಂಭಿಸಲಾಗಿದೆ.

ADVERTISEMENT

ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ವರ್ಗಾವಣೆ ಪ್ರಮಾಣಪತ್ರ, ಜಾತಿ, ಆದಾಯ ಪ್ರಮಾಣ ಪತ್ರ, ಕನ್ನಡ ಗ್ರಾಮೀಣ ಪ್ರಮಾಣ ಪತ್ರ, 371(ಜೆ) ಪ್ರಮಾಣಪತ್ರಗಳೊಂದಿಗೆ, ಎಲ್ಲ ಮೂಲ ದಾಖಲೆಗಳು ಮತ್ತು ಒಂದು ಜಿರಾಕ್ಸ್ ಪ್ರತಿಯನ್ನು ಸ್ವಯಂ ಧೃಢಿಕರಿಸಿ ಇತ್ತೀಚಿನ 4 ಭಾವಚಿತ್ರಗಳೊಂದಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 9110857878 ಅನ್ನು ಸಂಪರ್ಕಿಸಬೇಕು ಎಂದು ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯ ಹೊಸಳ್ಳಿ ಪ್ರಭು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.