ಬೀದರ್: ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘವು ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ಗೊಂಡ (ಕುರುಬ) ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದೆ.
ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 80ಕ್ಕೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷಕುಮಾರ ಜೋಳದಾಪಕೆ ತಿಳಿಸಿದ್ದಾರೆ.
ಆಸಕ್ತ ವಿದ್ಯಾರ್ಥಿಗಳು ಆಯಾ ಶಾಲೆಯ ಮುಖ್ಯಶಿಕ್ಷಕರು ಹಾಗೂ ಪ್ರಾಚಾರ್ಯರಿಂದ ದೃಢೀಕರಿಸಿದ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರದ ನಕಲು ಪ್ರತಿ, ಇತ್ತೀಚಿನ ಎರಡು ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಮೊಬೈಲ್ ಸಂಖ್ಯೆಯೊಂದಿಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ.
ಅರ್ಜಿ ಸಲ್ಲಿಕೆಗೆ ಜುಲೈ 15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9880802326ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಜುಲೈ ಕೊನೆಯ ವಾರದಲ್ಲಿ ನಗರದಲ್ಲಿ ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.