ADVERTISEMENT

 ಬೀದರ್: ಕಸಾಪ ಜಿಲ್ಲಾ ಘಟಕಕ್ಕೆ ನೇಮಕ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2022, 15:15 IST
Last Updated 7 ಮಾರ್ಚ್ 2022, 15:15 IST

ಬೀದರ್: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ತಿಳಿಸಿದ್ದಾರೆ.

ಪದಾಧಿಕಾರಿಗಳು: ಜಯದೇವಿ ಯದಲಾಪುರೆ, ಕಸ್ತೂರಿ ಪಟಪಳ್ಳಿ (ಮಹಿಳಾ ಪ್ರತಿನಿಧಿ), ಪ್ರೊ. ಸಿದ್ರಾಮಪ್ಪ ಮಾಸಿಮಾಡೆ (ನಿಕಟಪೂರ್ವ ಅಧ್ಯಕ್ಷ), ವಿಜಯಕುಮಾರ ಸೋನಾರೆ, ಡಾ. ಮಲ್ಲಿಕಾರ್ಜುನ ನಿಂಗದಳ್ಳಿ (ಪರಿಶಿಷ್ಟ ಜಾತಿ ಪ್ರತಿನಿಧಿ), ಸುನೀಲ್ ಭಾವಿಕಟ್ಟಿ (ಪರಿಶಿಷ್ಟ ಪಂಗಡ ಪ್ರತಿನಿಧಿ), ಬಸವರಾಜ ರುದನೂರು, ಮಲ್ಲಿಕಾರ್ಜುನ ಟಂಕಸಾಲೆ (ಗಡಿನಾಡು ಪ್ರತಿನಿಧಿ), ಗವಿಸಿದ್ದಪ್ಪ ಹೊಸಮನಿ (ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರತಿನಿಧಿ) ಮತ್ತು ಸಿದ್ರಾಮ ಸಿಂಧೆ (ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರತಿನಿಧಿ).

ಕೇಂದ್ರ ಪರಿಷತ್ ಅಧ್ಯಕ್ಷರ ಅನುಮೋದನೆ ಮೇರೆಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಪದಾಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ಸುರೇಶ ಚನಶೆಟ್ಟಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.