ADVERTISEMENT

ಫಸಲ್‌ವಿಮಾ ಯೋಜನೆ ಅನುಷ್ಠಾನಕ್ಕೆ ಅನುಮೋದನೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2021, 17:50 IST
Last Updated 10 ಜೂನ್ 2021, 17:50 IST

ಬೀದರ್‌: 2021-22ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನುಮೋದನೆ ನೀಡಿದೆ.

ಮಳೆ ಆಶ್ರಿತ ತೊಗರಿ, ಸೋಯಾಅವರೆ, ಹೆಸರು, ಸೂರ್ಯಕಾಂತಿ, ಉದ್ದು, ಮುಸುಕಿನ ಜೋಳ, ಶೇಂಗಾ, ಜೋಳ, ಎಳ್ಳು, ಸಜ್ಜೆ, ನೀರಾವರಿ ಆಶ್ರಿತ ಭತ್ತ, ಸೋಯಾಅವರೆ ಬೆಳೆ ವಿಮೆ ಅನುಷ್ಠಾನಕ್ಕೆ ಯುನಿವರ್ಸಲ್ ಸೊಂಪೊ ಜನರಲ್ ಇನ್ಸೂರೆನ್ಸ್‌ ಕಂಪನಿ ಲಿಮಿಟೆಡ್‌ಗೆ ಒಪ್ಪಿಸಲಾಗಿದೆ.

ವಿವಿಧ ಬೆಳೆಗಳಿಗೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರು ಜುಲೈ 31ರೊಳಗೆ ಹಾಗೂ ಮಳೆಯಾಶ್ರಿತ ಸೂರ್ಯಕಾಂತಿ ಬೆಳೆಗೆ ಆಗಸ್ಟ್ 16ರೊಳಗೆ ವಿಮೆ ಮಾಡಿಸಬೇಕು.

ADVERTISEMENT

ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಆಧಾರ್‌ ಸಂಖ್ಯೆ ಜೋಡಿಸಿದ ಬ್ಯಾಂಕ್ ಖಾತೆ, ಪಾಸ್‌ಬುಕ್, ಕಂದಾಯ ರಶೀದಿ ಮತ್ತು ಆಧಾರ ಕಾರ್ಡ್‍ನ ಪ್ರತಿಯನ್ನು ನೀಡಬೇಕು.

ಬೆಳೆವಿಮೆ ಮಾಡಲಿಚ್ಛಿಸದ ಸಾಲ ಪಡೆದ ರೈತರು ಬೆಳೆವಿಮೆ ಮಾಡಿಸಲು ನಿಗದಿಪಡಿಸಿರುವ ಅಂತಿಮ ದಿನಾಂಕಕ್ಕಿಂತ 7 ದಿನದ ಮುಂಚಿತವಾಗಿ ಸಂಬಂಧಪಟ್ಟ ಬ್ಯಾಂಕಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು.

ವಿವರಗಳಿಗೆ ಸ್ಥಳೀಯ ವಾಣಿಜ್ಯ, ಗ್ರಾಮೀಣ, ಸಹಕಾರಿ ಬ್ಯಾಂಕ್‌, ಸಾರ್ವಜನಿಕ ಸೇವಾ ಕೇಂದ್ರ, ರೈತ ಸಂಪರ್ಕ ಕೇಂದ್ರ ಅಥವಾ ಸಂಬಂಧಪಟ್ಟ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.