ADVERTISEMENT

ಔರಾದ್‍ನಲ್ಲಿ ಸಿಪೆಟ್ ಕೇಂದ್ರಕ್ಕೆ ಅನುಮೋದನೆ

ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 12 ಮೇ 2022, 14:26 IST
Last Updated 12 ಮೇ 2022, 14:26 IST
ಪ್ರಭು ಚವಾಣ್‌
ಪ್ರಭು ಚವಾಣ್‌   

ಬೀದರ್: ಔರಾದ್ ವಿಧಾನಸಭಾ ಕ್ಷೇತ್ರದ ಬಲ್ಲೂರ್(ಜೆ) ಗ್ರಾಮದಲ್ಲಿ ₹ 90 ಕೋಟಿ ವೆಚ್ಚದಲ್ಲಿ ಸಿಪೆಟ್ ಕೇಂದ್ರ ಆರಂಭಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವಾಣ್‌ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ 50:50 ಅನುಪಾತದಲ್ಲಿ ಸ್ಥಾಪನೆಯಾಗಲಿರುವ ಸೆಂಟ್ರಲ್ ಇನ್ಸಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ಸ್ ಎಂಜಿನಿಯರಿಂಗ್ ಹಾಗೂ ಟೆಕ್ನಾಲಜಿ (ಸಿಪೆಟ್) ಕೇಂದ್ರ ಆರಂಭಕ್ಕೆ ಅನುವು ಮಾಡಿಕೊಟ್ಟ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೃಹತ್ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಹಾಗೂ ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಪ್ರಭು ಚವಾಣ್‌ ಕೃತಜ್ಞತೆ ಹೇಳಿದ್ದಾರೆ.

2009ರಿಂದ ನಿರಂತರ ಪ್ರಯತ್ನ ಮಾಡಿದ್ದರಿಂದ ಸಿಪೆಟ್ ಕೇಂದ್ರ ಔರಾದ್ ತಾಲ್ಲೂಕಿಗೆ ಬಂದಿದೆ.

ಸಿಪೆಟ್ ಕೇಂದ್ರದ ಮೂಲಕ ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ವಾರ್ಷಿಕ 2000 ಅಭ್ಯರ್ಥಿಗಳಿಗೆ ತರಬೇತಿ ನೀಡಿ ಸ್ವಯಂ ಉದ್ಯೋಗ ಪ್ರಾರಂಭಿಸಲು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ವಾರ್ಷಿಕವಾಗಿ 180 ಡಿಪ್ಲೊಮಾ ಕೋರ್ಸ್ ನಡೆಸಲು ಉದ್ದೇಶಿಸಲಾಗಿದೆ. ಸ್ಥಳೀಯವಾಗಿ ಉದ್ಯೋಗ ಸೃಷ್ಟಿಠಿಯಾಗುವುದರಿಂದ ಹೈದರಾಬಾದ್, ಗೋವಾ, ಬೆಂಗಳೂರಿಗೆ ಉದ್ಯೋಗ ಅರಸಿ ಗುಳೆ ಹೋಗುವುದನ್ನು ತಪ್ಪಿಸಬಹುದಾಗಿದೆ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.