
ಕಮಠಾಣ(ಜನವಾಡ): ಬೀದರ್ ತಾಲ್ಲೂಕಿನ ಕಮಠಾಣ ಗ್ರಾಮದಲ್ಲಿ ಅಂತರರಾಷ್ಟ್ರೀಯ ಮಹಿಳಾ ದೌರ್ಜನ್ಯ ನಿರ್ಮೂಲನೆ ದಿನಾಚರಣೆ ಅಂಗವಾಗಿ ಮಂಗಳವಾರ ಕಾನೂನು ಅರಿವು ಹಾಗೂ ನೆರವು ಕಾರ್ಯಕ್ರಮ ನಡೆಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಬನಸೋಡೆ ಅವರು ಕಾನೂನು ಅರಿವಿನ ಅಗತ್ಯತೆಯನ್ನು ಮನವರಿಕೆ ಮಾಡಿದರು.
ವಕೀಲ ಬಿ. ಕೃಷ್ಣಪ್ಪ ಅವರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸೌಲಭ್ಯಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾ ನಿರೂಪಣಾ ಅಧಿಕಾರಿ ಶ್ರೀಕಾಂತ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾರದಾ ಎನ್. ಕಲ್ಮಲಕರ ಇದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.