ಪ್ರಾತಿನಿಧಿಕ ಚಿತ್ರ
ಔರಾದ್: ಪಟ್ಟಣದ ಬೌದ್ಧ ನಗರ ನಿವಾಸಿ ರಾಹುಲ್ ಬೊರೆ ಅವರ ಮೇಲಿನ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಇಲ್ಲಿಯ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
‘ಜುಲೈ 13ರಂದು ನಡೆದ ಮದುವೆ ಮೆರವಣಿಗೆಯಲ್ಲಿ ಹಲಗೆ ಬಾರಿಸುವವರನ್ನು ಕರೆದು ತರುವಂತೆ ನನ್ನನ್ನು ಒತ್ತಾಯಿಸಿದರು. ನಿರಾಕರಿಸಿರುವುದರಿಂದ ಅದನ್ನೇ ಮನದಲ್ಲಿ ಇಟ್ಟುಕೊಂಡು ಜುಲೈ 17ರಂದು ರಾತ್ರಿ ನನ್ನ ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ’ ಎಂದು ರಾಹುಲ್ ಬೊರೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಶಿವು, ಅನೀಲ, ಮಹೇಶ ಹಾಗೂ ಹರೀಶ ಎಂಬುವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ ಶುಕ್ರವಾರ ಇಲ್ಲಿಗೆ ಭೇಟಿ ನೀಡಿ ಪ್ರಕರಣದ ಪೂರ್ಣ ಮಾಹಿತಿ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.