ADVERTISEMENT

ಬೀದರ್: ಲಿಂಗರಾಜ ಅಪ್ಪ ಕಾಲೇಜಿನಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2021, 13:32 IST
Last Updated 17 ಸೆಪ್ಟೆಂಬರ್ 2021, 13:32 IST
ಬೀದರ್ ತಾಲ್ಲೂಕಿನ ಗೋರನಳ್ಳಿಯ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು
ಬೀದರ್ ತಾಲ್ಲೂಕಿನ ಗೋರನಳ್ಳಿಯ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು   

ಬೀದರ್: ತಾಲ್ಲೂಕಿನ ಗೋರನಳ್ಳಿಯ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನ ಆಚರಿಸಲಾಯಿತು.

ಡಾ. ಉಮಾ ದೇಶಮುಖ ಅವರು ಧ್ವಜಾರೋಹಣ ನೆರವೇರಿಸಿ, ಪೂಜ್ಯ ದೊಡ್ಡಪ್ಪ ಅಪ್ಪ ಅವರು ಹೈದರಾಬಾದ್ ಕರ್ನಾಟಕ ವಿಮೋಚನೆಗಾಗಿ ಹೋರಾಟ ನಡೆಸಿದ್ದರು. ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದ್ದರು ಎಂದು ಸ್ಮರಿಸಿದರು.

ಪ್ರಾಧ್ಯಾಪಕರಾದ ಸೂರ್ಯಕಾಂತ ಲಿಂಗದಳ್ಳಿ ಹಾಗೂ ಬಸವಲಿಂಗ ಸ್ವಾಮಿ ಅವರು ಹೈದರಾಬಾದ್ ಕರ್ನಾಟಕ ವಿಮೋಚನಾ ಚಳವಳಿ ಮೇಲೆ ಬೆಳಕು ಚೆಲ್ಲಿದರು.

ADVERTISEMENT

ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ಪ್ರಾಚಾರ್ಯೆ ಡಾ. ವಿನಿತಾ ಪಾಟೀಲ, ಶ್ರೀ ಶರಣಬಸವ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಸತೀಶ ಪ್ರತಾಪುರ, ಕಾಲೇಜಿನ ಎಲ್ಲ ವಿಭಾಗಗಳ ಮುಖ್ಯಸ್ಥರು, ಬೋಧಕ, ಬೋಧಕೇತರ ಸಿಬ್ಬಂದಿ ಇದ್ದರು.

ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು, ಶ್ರೀ ಶರಣಬಸವ ಪದವಿಪೂರ್ವ ಕಾಲೇಜು ಹಾಗೂ ಶರಣ ಬಸವ ಪಬ್ಲಿಕ್ ಸ್ಕೂಲ್ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.