ADVERTISEMENT

ತಹಶೀಲ್ದಾರ್ ಮೇಲೆ ಹಲ್ಲೆ: ನೌಕರರ ಸಂಘದ ಪ್ರತಿಭಟನೆ

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಪತ್ರ

​ಪ್ರಜಾವಾಣಿ ವಾರ್ತೆ
Published 29 ಜನವರಿ 2022, 13:46 IST
Last Updated 29 ಜನವರಿ 2022, 13:46 IST
ಹುಮನಾಬಾದ್ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಮೇಲಿನ ಹಲ್ಲೆ ಘಟನೆಯನ್ನು ಖಂಡಿಸಿ ಬೀದರ್‌ನಲ್ಲಿ ಶನಿವಾರ ಪ್ರತಿಭಟನೆ ನಡೆಸಿದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಸಲ್ಲಿಸಿದರು
ಹುಮನಾಬಾದ್ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಮೇಲಿನ ಹಲ್ಲೆ ಘಟನೆಯನ್ನು ಖಂಡಿಸಿ ಬೀದರ್‌ನಲ್ಲಿ ಶನಿವಾರ ಪ್ರತಿಭಟನೆ ನಡೆಸಿದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಸಲ್ಲಿಸಿದರು   

ಬೀದರ್: ಹುಮನಾಬಾದ್ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಮೇಲೆ ನಡೆದ ಹಲ್ಲೆ ಘಟನೆಯನ್ನು ಖಂಡಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೇರಿ ಘೋಷಣೆ ಕೂಗಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಸಲ್ಲಿಸಿದರು.

ಪ್ರತಿಭಟನೆ ನಡೆಸುತ್ತಿದ್ದ ಕೆಲವರು ಹುಮನಾಬಾದ್ ತಹಶೀಲ್ದಾರ್ ಕಚೇರಿಗೆ ನುಗ್ಗಿ, ಕುರ್ಚಿಗಳನ್ನು ಧ್ವಂಸಗೊಳಿಸಿ, ಕರ್ತವ್ಯ ನಿರತ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಆರೋಪಿಸಿದರು.

ADVERTISEMENT

ರಾಜ್ಯದಲ್ಲಿ ಈಚಿನ ದಿನಗಳಲ್ಲಿ ಸರ್ಕಾರಿ ಅಧಿಕಾರಿಗಳು, ನೌಕರರ ಮೇಲೆ ಹಲ್ಲೆ ಪ್ರಕರಣಗಳು ಅವ್ಯಾಹತವಾಗಿ ನಡೆಯುತ್ತಿವೆ. ನೌಕರರು ಆತಂಕದಲ್ಲಿ ಕರ್ತವ್ಯ ನಿರ್ವಹಿಸುವಂತಾಗಿದೆ ಎಂದು ದೂರಿದರು.

ತಹಶೀಲ್ದಾರ್ ಮೇಲೆ ಹಲ್ಲೆ ನಡೆಸಿದವರನ್ನು ಕೂಡಲೇ ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು. ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.

ಪ್ರೊಬೆಷ್‍ನರಿ ಐಎಎಸ್ ಅಧಿಕಾರಿ ಕೀರ್ತನಾ, ತಹಶೀಲ್ದಾರರಾದ ಅಣ್ಣಾರಾವ್ ಪಾಟೀಲ, ಶಕೀಲ್ ಅಹಮ್ಮದ್, ಗೇಡ್ 2 ತಹಶೀಲ್ದಾರ್ ಮಂಜುನಾಥ ಪಂಚಾಳ, ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಬಸವರಾಜ ಜಕ್ಕಾ, ಉಪಾಧ್ಯಕ್ಷರಾದ ಡಾ. ವೈಶಾಲಿ, ರೂಪಾದೇವಿ, ಪ್ರಧಾನ ಕಾರ್ಯದರ್ಶಿ ರಾಜಶೇಖರ ಮಂಗಲಗಿ, ಗೌರವ ಸಲಹೆಗಾರ ಶಿವರಾಜ ಕಪಲಾಪೂರೆ, ನಿರ್ದೇಶಕರಾದ ಗಣಪತಿ ಜಮಾದಾರ್, ಸುಮತಿ ರುದ್ರಾ, ಮಲ್ಲಮ್ಮ ಕಾರಬಾರಿ, ಸಂಗಮೇಶ, ನೀಲಕಂಠ ಬಿರಾದಾರ, ಶಿವಶಂಕರ, ಇಮಾನುವೆಲ್, ಶಾಬೊದ್ದಿನ್, ಹುಲೆಪ್ಪ ರೆಡ್ಡಿ, ರವೀಂದ್ರ ಗಾದಗಿ, ಶಿವಾನಂದ ಪಾಟೀಲ ಮೊದಲಾದವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.