ಬೀದರ್: ಬೆಂಗಳೂರಿನ ಪುಲಕೇಶಿನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ದಾಳಿ ನಡೆಸಿದ ಸಂಘಟನೆಗಳ ಪದಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಭೋವಿ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ.
ನಗರದಲ್ಲಿ ಬುಧವಾರ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಪತ್ರ ಸಲ್ಲಿಸಿದರು.
ಶಾಸಕರಿಗೆ ಪೊಲೀಸ್ ಬಿಗಿ ಭದ್ರತೆ ಒದಗಿಸಬೇಕು. ಅವರ ಆಸ್ತಿಗೆ ಉಂಟಾದ ನಷ್ಟವನ್ನು ನಷ್ಟ ಮಾಡಿದವರಿಂದಲೇ ವಸೂಲಿ ಮಾಡಬೇಕು. ದೇಶದ್ರೋಹಿ ಚಟುವಟಿಕೆ ನಡೆಸುವ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.
ಸಮಾಜದ ದತ್ತು ಪವಾರ್, ಪುಂಡಲೀಕ ನಿಂಗದಳ್ಳಿಕರ್, ಸಂಜುಕುಮಾರ ವಾಡೇಕರ್, ವೈಜಿನಾಥ ಒಡೆಯರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.