ADVERTISEMENT

ಜನವಾಡ: ಎನ್‍ಎಸ್‍ಎಸ್‍ಕೆಗೆ ಬೀಗಕ್ಕೆ ಯತ್ನ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2021, 16:14 IST
Last Updated 27 ಸೆಪ್ಟೆಂಬರ್ 2021, 16:14 IST

ಜನವಾಡ: ಕಬ್ಬು ಬಾಕಿ ಹಣ ಪಾವತಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಬೀದರ್ ತಾಲ್ಲೂಕಿನ ಜನವಾಡ ಸಮೀಪದ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಗೆ ಬೀಗ ಹಾಕಲು ಯತ್ನಿಸಿದರು.

ಘೋಷಣೆ ಕೂಗುತ್ತ ಬಂದ ಕಾರ್ಯಕರ್ತರು ಬೀಗ ಹಾಕಲು ಯತ್ನಿಸಿದಾಗ, ಪೊಲೀಸರು ಅವರನ್ನು ತಡೆದರು. ಈ ನಡುವೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ನಂತರ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದು, ಅನಂತರ ಬಿಡುಗಡೆ ಮಾಡಿದರು.

ಸಕ್ಕರೆ ಕಾರ್ಖಾನೆಯು ಪ್ರತಿ ಟನ್ ಕಬ್ಬಿಗೆ ₹ 2,400 ಬೆಲೆ ನಿಗದಿಪಡಿಸಿದ್ದು, ₹ 1,950 ಮಾತ್ರ ಪಾವತಿಸಿದೆ. ಬಾಕಿ ರೂ. 450 ಕೂಡಲೇ ಸಂದಾಯ ಮಾಡಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.

ADVERTISEMENT

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ, ಮುಖಂಡರಾದ ಶ್ರೀಮಂತ ಬಿರಾದಾರ, ಬಾಬುರಾವ್ ಜೋಳದಾಪಕಾ, ಕೇಶವರಾವ್ ಕಣಜಿ, ನಾಗಯ್ಯ ಸ್ವಾಮಿ, ಶಂಕರೆಪ್ಪ, ಮಲ್ಲಿಕಾರ್ಜುನ ಚಕ್ಕಿ, ಪ್ರಕಾಶ ಬಾವಗೆ, ಭಾಗ್ಯಶ್ರೀ ದೇಶಮುಖ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.