ಬೀದರ್: ಅಂಗವಿಕಲರ ಕಲಾವಿದರ ರಾಜ್ಯಮಟ್ಟದ ಕಲಾ ಪ್ರತಿಭೋತ್ಸವ ಕಾರ್ಯಕ್ರಮ ನಗರದ ಡಾ. ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಇತ್ತೀಚೆಗೆ ನಡೆಯಿತು.
ತಬಲ ಸೋಲೊ, ಕೊಳಲು ವಾದನ, ಸುಗಮ ಸಂಗೀತ, ದಾಸರ ಪದ, ಭಾವ ಗೀತೆ, ವಚನ ಗಾಯನ, ಭಕ್ತಿ ಗೀತೆ ಹಾಗೂ ಜಾನಪದ ಗೀತೆಗಳನ್ನು ಸುಮಧುರವಾಗಿ ಹಾಡಿ ಅಂಗವಿಕಲರು ಅವರ ಪ್ರತಿಭೆ ಪ್ರಸ್ತುತಪಡಿಸಿ ಗಮನ ಸೆಳೆದರು.
ಜೀವನ ಪ್ರಕಾಶ ಸೊಸೈಟಿಯ ಅಧ್ಯಕ್ಷ ದಿಲೀಪ್ ಕಾಡವಾದ ಮಾತನಾಡಿ, ವಿಶೇಷ ಚೇತನರು ಯಾವುದರಲ್ಲೂ ಕಡಿಮೆ ಇಲ್ಲ. ಸಂಗೀತ ಕ್ಷೇತ್ರದಲ್ಲಿ ಇನ್ನಷ್ಟು ಸಾಧಿಸಬೇಕೆಂಬ ಛಲ ಹೊಂದಿದ್ದಾರೆ ಎಂದರು.
ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು ಮಾತನಾಡಿ, ವಿಶೇಷ ಚೇತನ ಕಲಾವಿದರಿಗೆ ವೇದಿಕೆ ಒದಗಿಸುವ ಹಾಗೂ ಪ್ರೋತ್ಸಾಹಿಸುವ ಕೆಲಸ ಆಗಬೇಕು. ಸರ್ಕಾರ ಹಾಗೂ ಸಂಘ ಸಂಸ್ಥೆಗಳು ಅವರ ಬೆಳವಣಿಗೆಗೆ ಸಹಕರಿಸಬೇಕಿದೆ ಎಂದು ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಕಾರ್ಯಕ್ರಮ ಉದ್ಘಾಟಿಸಿದರು.
ಕೆಥೊಲಿಕ್ ಚರ್ಚ್‍ನ ಫಾದರ್ ವಿಲ್ಸನ್ ಫರ್ನಾಂಡೀಸ್, ಸೊಸೈಟಿ ಕಾರ್ಯದರ್ಶಿ ಏಸ್ತೇರ್ ಡಿ. ಕಾಡವಾದ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಬಸವರಾಜ ದೇಶಮುಖ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ನಾಗರಾಜ ಮಠ, ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್. ಮನೋಹರ, ಪ್ರಮುಖರಾದ ಜಸ್‍ಪ್ರೀತ್‍ಸಿಂಗ್ ಮೌಂಟಿ, ಮಾಧವರಾವ್ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.