ಔರಾದ್: ತಾಲ್ಲೂಕಿನ ಬೋಂತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾವರಗಾಂವ್ ಗ್ರಾಮಸ್ಥರಿಗೆ ಕುಡಿಯುವ ನೀರು ಪೂರೈಸಲು ನಿರ್ದೇಶನ ನೀಡುವಂತೆ ಸಾಮಾಜಿಕ ಹೋರಾಟಗಾರ ಗುರುನಾಥ ವಡ್ಡೆ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಸಾವರಗಾಂವ್ ಗ್ರಾಮಸ್ಥರು ಪ್ರತಿ ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಪರದಾಡುವುದು ಸಾಮಾನ್ಯವಾಗಿದೆ. ಈ ವರ್ಷ ಮಳೆ ಕಡಿಮೆಯಾಗಿ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡಿದೆ. ನೀರು ತರಲು ಮಹಿಳೆಯರು, ಮಕ್ಕಳು ಅಹೋರಾತ್ರಿ ಅಲೆಯಬೇಕಾಗಿದೆ. ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ₹141 ಲಕ್ಷ ಅನುದಾನ ಮಂಜೂರಾದರೂ ಜನರಿಗೆ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಗ್ರಾಮಸ್ಥರ ಸಂಕಟ ತಪ್ಪಿಸಲು ತಕ್ಷಣ ಕುಡಿಯುವ ನೀರು ಪೂರೈಸಲು ಸಂಬಂಧಿತರಿಗೆ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಕೋರಿ ಏ.23ರಂದು ಬೆಂಗಳೂರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಬೀದರ್ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ಪ್ರತಿವಾದಿಗಳಾಗಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.