ಔರಾದ್: ಸಾಹಿತಿ ಹಾಗೂ ಸ್ಪರ್ಧಾ ಸಂಕಲ್ಪ ಅಕಾಡೆಮಿ ಅಧ್ಯಕ್ಷ ನಾಗೇಶ ಸ್ವಾಮಿ ಮಸ್ಕಲ್ ಅವರನ್ನು ಭಾರತೀಯ ಸಾಹಿತ್ಯ ಪರಿಷತ್ ಜಿಲ್ಲಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಹುಬ್ಬಳ್ಳಿಯಲ್ಲಿ ಈಚೆಗೆ ನಡೆದ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಜಿಲ್ಲಾ ಕಾರ್ಯದರ್ಶಿಗಳ ವರ್ಗ ಸಭೆಯಲ್ಲಿ ನಾಗೇಶ್ ಸ್ವಾಮಿ ಅವರಿಗೆ ಪರಿಷತ್ತಿನ ಬೀದರ್ ಜಿಲ್ಲೆಯ ಜವಾಬ್ದಾರಿ ವಹಿಸಿಕೊಡಲಾಗಿದೆ ಎಂದು ಪರಿಷತ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದನ್ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಸೇವಿರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.