
ಪ್ರಜಾವಾಣಿ ವಾರ್ತೆ
ಔರಾದ್: ತಾಲ್ಲೂಕಿನ ಬೋಂತಿಯ ಘಮಸುಬಾಯಿ ತಾಂಡಾದಲ್ಲಿ ಫೆ.10ರಿಂದ 12ರ ವರೆಗೆ ಜಗದಂಬಾ ದೇವಿಯ ಜಾತ್ರಾ ಮಹೋತ್ಸವ ನಡೆಯಲಿದೆ.
ಜಾತ್ರೆ ಅಂಗವಾಗಿ ಜಗದಂಬಾ, ಸಂತ ಸೇವಾಲಾಲ್ ಮಹಾರಾಜ, ರಾಮರಾವ ಮಹಾರಾಜರ ದೇವಸ್ಥಾನಗಳಲ್ಲಿ ಪೂಜೆ, ಪ್ರಾರ್ಥನೆ ನಡೆಯಲಿದೆ.
11ರಂದು ಬೆಳಿಗ್ಗೆ ಜಾನಪದ ಸಂಭ್ರಮ ಆಯೋಜಿಸಲಾಗಿದೆ. ಸ್ಥಳೀಯ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಕಲಾವಿದರಿಂದ ಜಾನಪದ ಗಾಯನ, ನೃತ್ಯ, ಭಕ್ತಿಗೀತೆ, ಕೋಲಾಟ, ಭಜನೆ, ಕೀರ್ತನೆಯಂತಹ ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
12ರಂದು ಮಧ್ಯಾಹ್ನ 2ರಿಂದ ಕುಸ್ತಿ ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ. ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ವಿವಿಧೆಡೆಯಿಂದ ಕುಸ್ತಿಪಟುಗಳು ಪಾಲ್ಗೊಳ್ಳಲಿದ್ದಾರೆ. ವಿಜೇತರಿಗೆ ಪ್ರಥಮ ₹11,001, ದ್ವಿತೀಯ ₹7001 ನಗದು ನೀಡಲಾಗುವುದು ಎಂದು ಶಾಸಕ ಪ್ರಭು ಚವಾಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.