
ಪ್ರಜಾವಾಣಿ ವಾರ್ತೆ
ಔರಾದ್ (ಬೀದರ್ ಜಿಲ್ಲೆ): ಬೀದರ್-ಔರಾದ್ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ಬೈಕ್‌ಗೆ ಬಸ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರು ಔರಾದ್ ತಾಲ್ಲೂಕಿನ ಬಲ್ಲೂರ (ಜೆ) ಗ್ರಾಮದ ಬಸವರಾಜ ಕಂಟೆಪ್ಪ (34) ಎಂದು ಗುರುತಿಸಲಾಗಿದೆ. ಮೃತ ಬಸವರಾಜ ಅವರು ಬಲ್ಲೂರದಿಂದ ಕೌಠಾಗೆ ಹೋಗುವಾಗ ಹಿಂದಿನಿಂದ ಬಂದ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ಮೃತರಿಗೆ ತಂದೆ-ತಾಯಿ, ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಈ ಕುರಿತು ಸಂತಪೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.