ಬೀದರ್: ‘ಜಿಲ್ಲೆಯ ಗ್ರಾಮೀಣ ಭಾಗದ ಮಕ್ಕಳು ನಗರ ಪ್ರದೇಶದ ಶಾಲಾ-ಕಾಲೇಜುಗಳಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ಅವರಿಗೆ ತರಗತಿಗೆ ಹಾಜರಾಗಲು ಸಕಾಲಕ್ಕೆ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕು’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು.
ನಗರದ ಸಾರಿಗೆ ನಿಗಮ ಬೀದರ್ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.
‘ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳ ಪಾತ್ರ ದೊಡ್ಡದಿದೆ. ನಗರ, ಪಟ್ಟಣಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಭಾಗದ ಮಕ್ಕಳಿಗೆ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸಿದರೆ ಉತ್ತಮ ಶಿಕ್ಷಣ ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಯಾವ ಮಗುವೂ ಬಸ್ ಸೇವೆ ಸಿಗದೇ ಶಿಕ್ಷಣದಿಂದ ವಂಚಿತ ಆಗಬಾರದು’ ಎಂದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ,. ಡಾ.ತಿಪ್ಪೇಸ್ವಾಮಿ ಕೆ.ಟಿ, ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಚಂದ್ರಕಾಂತ ಫುಲೇಕರ್ ಸೇರಿದಂತೆ ಹಲವರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.