ADVERTISEMENT

ಔರಾದ್: ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2025, 5:59 IST
Last Updated 31 ಆಗಸ್ಟ್ 2025, 5:59 IST
ಔರಾದ್ ತಾಲ್ಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಕಾಂಗ್ರೆಸ್ ಮುಖಂಡರು ಭೇಟಿ ನೀಡಿ ಪರಿಶೀಲಿಸಿದರು
ಔರಾದ್ ತಾಲ್ಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಕಾಂಗ್ರೆಸ್ ಮುಖಂಡರು ಭೇಟಿ ನೀಡಿ ಪರಿಶೀಲಿಸಿದರು   

ಔರಾದ್: ಭಾರಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಹಿರಿಯ ಕಾಂಗ್ರೆಸ್ ಮುಖಂಡ ಭೀಮಸೇನರಾವ ಸಿಂಧೆ ಇತರರು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

ಹಾಳಾದ ರಸ್ತೆ, ಸೇತುವೆ, ಕೋಡಿ ಒಡೆದ ಕೆರೆಗಳು, ಗೋಡೆ ಕುಸಿದ ಮನೆಗಳು ವೀಕ್ಷಿಸಿದರು.

ಪಟ್ಟಣದ ರಾಮನಗರ, ಹಮಾಲ್ ಕಾಲೋನಿ, ಎಕಂಬಾ, ದುಡುಕನಾಳ, ಬಾದಲಗಾಂವ, ಮಮದಾಪುರ, ತೇಗಂಪೂರ, ಯನಗುಂದಾ, ಚಿಂತಾಕಿ ಗ್ರಾಮಗಳ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

ADVERTISEMENT

ಮಾಂಜ್ರಾ ನದಿ, ಕೆರೆಯಂಚಿನ ಹಾಗೂ ಕೆರೆ ಕೆಳಭಾಗದ ಜಮೀನುಗಳಿಗೆ ಧಾರಾಕಾರ ಮಳೆಯಿಂದ ನೀರು ನುಗ್ಗಿವೆ. ರೈತರು ಬೆಳೆದಿರುವ ಬೆಳೆಯೊಂದಿಗೆ ಜಮೀನಿನಲ್ಲಿರುವ ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋಗಿದೆ. ಜಾನುವಾರುಗಳು ಸತ್ತಿವೆ. ಇದರಿಂದ ರೈತರ ಕುಟುಂಬಗಳು ಬೀದಿಗೆ ಬಂದಿವೆ ಎಂದು ಸಂತ್ರಸ್ತರು ಹೇಳಿಕೊಂಡರು.

ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಸಿದ್ಧವಿದೆ. ಕ್ಷೇತ್ರದ ಜನರ ಸಮಸ್ಯೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಸಚಿವ ರಹೀಂಖಾನ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸರಕಾರದ ಗಮನಕ್ಕೂ ತಂದಿದ್ದಾರೆ. ಕ್ಷೇತ್ರದ ರೈತರ ಸಮಸ್ಯೆ ಸ್ಪಂದಿಸುವ ಕೆಲಸ ಕಾಂಗ್ರೆಸ್‌ ಸರ್ಕಾರ ಮಾಡುತ್ತದೆ ಎಂದು ಸಿಂಧೆ ಹೇಳಿದರು. ಔರಾದ್ ಹಾಗೂ ಕಮಲನಗರ ತಾಲ್ಲೂಕಿನ ಜನರ ನೆರವಿಗೆ ವಿಶೇಷ ಪ್ಯಾಕೇಜ್ ಕೊಡಲು ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಹೇಳಿದರು.

ತಾ.ಪಂ ಮಾಜಿ ಅಧ್ಯಕ್ಷ ನೆಹರು ಪಾಟೀಲ್, ರಾಮಣ್ಣ ವಡಿಯಾರ, ಶಿವರಾಜ ದೇಶಮುಖ, ಸೂರ್ಯಕಾಂತ ಮಮದಾಪುರ, ರತ್ನದೀಪ‌ ಕಸ್ತೂರೆ, ಸುನೀಲ‌ ಮಿತ್ರಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.