ಬಂಧನ
(ಪ್ರಾತಿನಿಧಿಕ ಚಿತ್ರ)
ಔರಾದ್ (ಬೀದರ್ ಜಿಲ್ಲೆ): ಪಟ್ಟಣದ ಯುವಕನೊಬ್ಬ 11 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ.
ಘಟನೆ ಸಂಬಂಧ 27 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ಹಾಗೂ ಯುವಕ ಒಂದೇ ಬಡಾವಣೆಯಲ್ಲಿ ವಾಸವಿದ್ದು, ಆಗಾಗ ಯುವಕ ಬಾಲಕಿ ಜತೆ ಅನುಚಿತವಾಗಿ ವರ್ತಿಸುತ್ತಿದ್ದ. ಪಾಲಕರಿಗೆ ವಿಷಯ ಗೊತ್ತಾದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.