ಪ್ರಾತಿನಿಧಿಕ ಚಿತ್ರ
ಔರಾದ್: ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯೊಬ್ಬರು ಶನಿವಾರ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಮಲನಗರ ತಾಲ್ಲೂಕಿನ ಚಿಕ್ಲಿ (ಯು) ತಾಂಡಾದ ವಂದನಾ ಗಣೇಶ ಪವಾರ್ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಇತರ ವಿದ್ಯಾರ್ಥಿನಿಯರು ಊಟಕ್ಕೆ ಹೋದಾಗ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಹಾಗೂ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
‘ಆತ್ಮಹತ್ಯೆಗೆ ಕಾರಣ ಪತ್ತೆ ಮಾಡುತ್ತಿದ್ದೇವೆ. ವಿದ್ಯಾರ್ಥಿನಿ ಪಾಲಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.