ADVERTISEMENT

‘2750 ಹೆಚ್ಚುವರಿ ಮನೆಗಳು ಮಂಜೂರು’

​ಪ್ರಜಾವಾಣಿ ವಾರ್ತೆ
Published 19 ಮೇ 2022, 3:11 IST
Last Updated 19 ಮೇ 2022, 3:11 IST

ಔರಾದ್: ‘ಈ ವಿಧಾನಸಭೆ ಕ್ಷೇತ್ರಕ್ಕೆ ಸರ್ಕಾರ 2750 ಹೆಚ್ಚುವರಿ ಮನೆಗಳನ್ನು ಮಂಜೂರು ಮಾಡಿದೆ’ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ತಿಳಿಸಿದ್ದಾರೆ.

‘ಸರ್ಕಾರ ಈ ಹಿಂದೆ ನನ್ನ ಕ್ಷೇತ್ರಕ್ಕೆ 800 ಮನೆ ಮಂಜೂರು ಮಾಡಿತ್ತು. ಇಷ್ಟು ಮನೆ ಸಾಕಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವಸತಿ ಸಚಿವ ವಿ.ಸೋಮಣ್ಣ ಅವರಿಗೆ ಮನವರಿಕೆ ಮಾಡಿಕೊಡಲಾಗಿತ್ತು. ತಕ್ಷಣ 2750 ಹೆಚ್ಚುವರಿ ಮನೆ ಮಂಜೂರು ಮಾಡಿದ್ದಾರೆ’ ಎಂದು ಹೇಳಿದ್ದಾರೆ.

‘ಗುಡಿಸಲು ಮುಕ್ತ ಕ್ಷೇತ್ರ ಮಾಡುವುದು ನಮ್ಮ ಗುರಿ. ಈ ನಿಟ್ಟಿನಲ್ಲಿ ಹೊಸದಾಗಿ ಮಂಜೂರಾದ ಮನೆಗಳನ್ನು ನಿವೇಶನ ರಹಿತರಿಗೆ ಹಂಚಿಕೆ ಮಾಡಬೇಕು. ಈಗಾಗಲೇ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ನಿವೇಶನ ರಹಿತರ ಪಟ್ಟಿ ಇದೆ. ಅದನ್ನು ಸರಿಯಾಗಿ ಪರಿಶೀಲಿಸಿ ಮನೆ ಇಲ್ಲದವರಿಗೆ ಮಾತ್ರ ಮನೆ ಸಿಗುವಂತೆ ನೋಡಿಕೊಳ್ಳಬೇಕು. ಈ ವಿಷಯದಲ್ಲಿ ಲೋಪ ಆದರೆ ಸಹಿಸುವುದಿಲ್ಲ’ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.