ಬೀದರ್: ‘ಜಿಲ್ಲೆಯ ಜನತೆಗೆ ಇಂದು ಸುದಿನ, ಪ್ರಧಾನಿ ಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ಬೀದರ್ ಸಂಸದ ಭಗವಂತ ಖೂಬಾ ಸೇರ್ಪಡೆಗೊಂಡಿದ್ದು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚು ಅನುಕೂಲವಾಗಿದೆ’ ಎಂದು ಪಶುಸಂಗೋಪನೆ ಸಚಿವ ಪ್ರಭು ಚವಾಣ್ ಹರ್ಷ ವ್ಯಕ್ತಪಡಿಸಿದ್ದಾರೆ.
‘ಭಗವಂತ ಖೂಬಾ ಅವರೂ ಔರಾದ್ ಮೂಲದವರಾಗಿರುವ ಕಾರಣ ನನಗೆ ಹೆಚ್ಚು ಸಂತೋಷವಾಗಿದೆ. ಈಗ ಔರಾದ್
ಕ್ಷೇತ್ರ ಪವರ್ ಸೆಂಟರ್ ಆಗಿ ಗುರುತಿಸಿಕೊಂಡಿದೆ. ಕೇಂದ್ರ ಸಂಪುಟದಲ್ಲಿ ಮೊದಲ ಬಾರಿಗೆ ಜಿಲ್ಲೆಗೆ ಪ್ರಾತಿನಿಧ್ಯ ದೊರಕಿದೆ. ಬೀದರ್ ಅನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲು ಪ್ರಮಾಣಿಕ ಪ್ರಯತ್ನ ಮಾಡುತ್ತೇವೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.