
ಔರಾದ್: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸುವ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಮಿಂಚಿನ ಸಂಚಾರ ನಡೆಸಿದ್ದಾರೆ.
ಆಯಾ ಗ್ರಾಮ ಪಂಚಾಯಿತಿಯಲ್ಲಿ ನೇಮಕಗೊಂಡ ಆಡಳಿತಾಧಿಕಾರಿಗಳು ಹಾಗೂ ಅಭಿವೃದ್ಧಿ ಅಧಿಕಾರಿಗಳು ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಶಾಲೆಗಳಿಗೆ ಭೇಟಿ ನೀಡಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ನೀಡುತ್ತಿದ್ದಾರೆ.
ಈ ನಿಟ್ಟಿನಲ್ಲಿ ತಾಲ್ಲೂಕು ಪಂಚಾಯಿತಿ ಇಒ ಕಿರಣ ಪಾಟೀಲ ಬುಧವಾರ ಎಕಂಬಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ಜತೆ ಸಮಾಲೋಚನೆ ನಡೆಸಿದರು.
ಮಾರ್ಚ್ 16ರಿಂದ ವಾರ್ಷಿಕ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಬಾಕಿ ಪಠ್ಯಕ್ರಮ ಪೂರ್ಣ ಮಾಡುವುದರ ಜತೆಗೆ ಹಿಂದಿನ ಐದಾರು ವರ್ಷಗಳ ಪ್ರಶ್ನೆಪತ್ರಿಕೆ ಬಿಡಿಸಲು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಆಡಳಿತಾಧಿಕಾರಿ ಹಾಗೂ ಪಿಡಿಒಗಳು ಸಂಜೆ ಹೊತ್ತು ಎಸ್‌ಎಸ್‌ಎಲ್‌ಸಿ ಓದುವ ಮಕ್ಕಳ ಮನೆಗೆ ಭೇಟಿ ನೀಡಬೇಕು. ಓದಿನ ವೇಳೆಯಲ್ಲಿ ಅವರ ಮನೆಯಲ್ಲಿ ಮೊಬೈಲ್ ಬಳಸದಂತೆ ಪಾಲಕರಿಗೆ ತಿಳಿ ಹೇಳಬೇಕು. ಕಲಿಕೆಯಲ್ಲಿ ಸ್ವಲ್ಪ ಹಿನ್ನಡೆ ಇರುವ ಮಕ್ಕಳ ಕಡೆ ವಿಶೇಷ ಗಮನ ಹರಿಸಬೇಕು’ ಎಂದರು.
ಶಿಕ್ಷಣ ಸಂಯೋಜಕರು, ಮುಖ್ಯ ಶಿಕ್ಷಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.