ಬೀದರ್: ರಾತ್ರಿ ಸುರಿದ ಭಾರಿ ಮಳೆಗೆ ಜಿಲ್ಲೆಯ ಜಿಲ್ಲೆಯ ಔರಾದ್ ತಾಲ್ಲೂಕಿನ ಬೊಂತಿ ಕೆರೆ ಒಡೆದು ಅಪಾರ ಪ್ರಮಾಣದ ಹಾನಿಯಾಗಿದೆ.
ಕೆರೆ ಒಡೆದು ಅಕ್ಕಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ. ನೆರೆಯ ಭಂಡಾರಕುಮಟಾ ಹಾಗೂ ಬಾವಲ್ ಗಾಂವ್ ಗ್ರಾಮಸ್ಥರನ್ನು ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ. ತಗ್ಗು ಪ್ರದೇಶದ ಜನರಿಗೆ ಸರ್ಕಾರಿ ಶಾಲೆಯಲ್ಲಿ ಇರಲು ವ್ಯವಸ್ಥೆ ಮಾಡಲಾಗಿದೆ.
ಕಮಲನಗರ ತಾಲ್ಲೂಕಿನ ಬಿಜಲ್ ಗಾಂವ್ ನಲ್ಲಿ ಭಾರಿ ಮಳೆಗೆ ಜಾನುವಾರು ಕೊಚ್ಚಿ ಹೋಗಿದ್ದು, ಅವುಗಳ ನಿಖರ ಸಂಖ್ಯೆ ಇನ್ನಷ್ಟೇ ಗೊತ್ತಾಗಬೇಕಿದೆ. ಹಾನಿಯಾದ ಎರಡೂ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ಕೊಟ್ಟಿದ್ದಾರೆ.
ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಔರಾದ್ ತಾಲ್ಲೂಕಿನ ಎಲ್ಲ ಅಂಗನವಾಡಿ ಕೇಂದ್ರಗಳು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಮಹೇಶ ಪಾಟೀಲ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.