ADVERTISEMENT

ಪೊಲೀಸರಿಂದ ಜಾಗೃತಿ ಓಟ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2024, 6:36 IST
Last Updated 10 ಮಾರ್ಚ್ 2024, 6:36 IST
   

ಬೀದರ್: ಕರ್ನಾಟಕ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವದ ಹಾಗೂ ಡ್ರಗ್ಸ್ ದುಷ್ಪರಿಣಾಮ ತಡೆ ಅಂಗವಾಗಿ ಪೊಲೀಸರಿಂದ ನಗರದಲ್ಲಿ ಭಾನುವಾರ ಜಾಗೃತಿ ಓಟ ನಡೆಯಿತು.

ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಅವರು ಜಾಗೃತಿ ಓಟಕ್ಕೆ ಚಾಲನೆ ನೀಡಿದರು.

ಬೀದರ್ ಕೋಟೆಯಿಂದ ಆರಂಭಗೊಂಡ ಓಟವು ನಗರದ ಪ್ರಮುಖ ಮಾರ್ಗಗಳ ಮೂಲಕ ಬರೀದ್‌ಷಾಹಿ ಉದ್ಯಾನದ ವರೆಗೆ ನಡೆಯಿತು.

ADVERTISEMENT

ಇದಕ್ಕೂ ಮುನ್ನ ಚನ್ನಬಸವಣ್ಣ ಎಸ್.ಎಲ್. ಮಾತನಾಡಿ, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದೆ. ಇದರ ಅಂಗವಾಗಿ ಡ್ರಗ್ಸ್ ಕುರಿತು ಜಾಗೃತಿ ಮೂಡಿಸಲು ರಾಜ್ಯದಾದ್ಯಂತ ಜಾಗೃತಿ ಓಟ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಹೆಚ್ವುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ ಮೇಘಣ್ಣನವರ, ಡಿವೈಎಸ್ಪಿ ಶಿವಾನಂದ, ಅಧಿಕಾರಿಗಳು, ಕೆಎಸ್ಆರ್ಪಿ, ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗ, ವಿವಿದ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.