ADVERTISEMENT

ಜಾಗೃತಿ ಸಂಚಾರಿ ವಾಹನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2020, 13:57 IST
Last Updated 11 ಜುಲೈ 2020, 13:57 IST
ಬೀದರ್‌ನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಜನಜಾಗೃತಿ ಸಂಚಾರಿ ವಾಹನಕ್ಕೆ ಸಂಸದರಾದ ಭಗವಂತ ಖೂಬಾ ಹಸಿರು ನಿಶಾನೆ ತೋರಿಸಿದರು
ಬೀದರ್‌ನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಜನಜಾಗೃತಿ ಸಂಚಾರಿ ವಾಹನಕ್ಕೆ ಸಂಸದರಾದ ಭಗವಂತ ಖೂಬಾ ಹಸಿರು ನಿಶಾನೆ ತೋರಿಸಿದರು   

ಬೀದರ್: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಜನಜಾಗೃತಿ ಸಂಚಾರಿ ವಾಹನಕ್ಕೆ ಇಲ್ಲಿಯ ಕೃಷಿ ಇಲಾಖೆ ಕಚೇರಿ ಆವರಣದಲ್ಲಿ ಸಂಸದ ಭಗವಂತ ಖೂಬಾ ಶುಕ್ರವಾರ ಚಾಲನೆ ನೀಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಸಣ್ಣ ಪ್ರೀಮಿಯಂ ದೊಡ್ಡ ಸುರಕ್ಷೆ ಎನ್ನುವ ಕರಪತ್ರ ಮತ್ತು ಕರ್ನಾಟಕ ರಾಜ್ಯ ಕೃಷಿ ಇಲಾಖೆ, ಜಿಲ್ಲಾ ಪಂಚಾಯಿತಿ ಹಾಗೂ ಕೃಷಿ ಇಲಾಖೆ ಪ್ರಕಟಿಸಿದ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ಮುಂಗಾರು-2020-21ರ ಕರಪತ್ರಗಳನ್ನು ಬಿಡುಗಡೆ ಮಾಡಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ವಿದ್ಯಾನಂದ ಸಿ. ಮಾಹಿತಿ ನೀಡಿದರು.

ಕೃಷಿ ಇಲಾಖೆ ಉಪ ನಿರ್ದೇಶಕ ಸೋಮಶೇಖರ ಬಿರಾದಾರ, ಲೀಡ್ ಬ್ಯಾಂಕ್ ಮ್ಯಾನೇಜರ್ ಬಿ.ಎಂ.ಕಮತಗಿ, ಸಹಾಯಕ ನಿರ್ದೆಶಕ ಕೆ.ಎಂ.ಅನ್ಸಾರಿ, ಡಿಸಿಸಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಲ್ಲಿಕಾರ್ಜುನ ಮಹಾಜನ, ಪ್ರಧಾನ ವ್ಯವಸ್ಥಾಪಕ ಚನ್ನಬಸಯ್ಯ ಸ್ವಾಮಿ ಹಾಗೂ ಸಹಾಯಕ ಪ್ರಧಾನ ವ್ಯವಸ್ಥಾಪಕ ಬಸವರಾಜ ಕಲ್ಯಾಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT