ಬಾಬು ಹೊನ್ನಾ ನಾಯ್ಕ
ಬೀದರ್: ಕಾಂಗ್ರೆಸ್ ಮುಖಂಡ ಬಾಬು ಹೊನ್ನಾ ನಾಯ್ಕ ಅವರನ್ನು ಭೀಮರಾಯನಗುಡಿ ಕೃಷ್ಣಾ ಮೇಲ್ದಂಡೆ ಯೋಜನೆ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ (ಕಾಡಾ) ಅಧ್ಯಕ್ಷರಾಗಿ ಸರ್ಕಾರ ನೇಮಕ ಮಾಡಿದೆ.
ಮೂಲತಃ ಬಸವಕಲ್ಯಾಣದ ಹಾಮುನಗರ ತಾಂಡಾದವರಾದ ಬಾಬು ಅವರು, ಸದ್ಯ ಬಸವಕಲ್ಯಾಣ ನಗರದಲ್ಲಿ ನೆಲೆಸಿದ್ದಾರೆ. ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದಾರೆ.
ಕಳೆದ ಒಂದೂವರೆ ದಶಕಕ್ಕೂ ಹೆಚ್ಚಿನ ಅವಧಿಯಿಂದ ಕಾಂಗ್ರೆಸ್‌ನಲ್ಲಿ ಸಕ್ರಿಯರಾಗಿದ್ದಾರೆ. ಲಂಬಾಣಿ ಸಮುದಾಯಕ್ಕೆ ಸೇರಿದ ಇವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.
ಈ ಹಿಂದೆ ಜನತಾ ಪರಿವಾರದಲ್ಲಿದ್ದ ಬಾಬು ಅವರು, ಬಸವರಾಜ ಪಾಟೀಲ ಅಟ್ಟೂರ ಅವರೊಂದಿಗೆ ಗುರುತಿಸಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.