ADVERTISEMENT

ಜೆಸ್ಕಾಂ ನಿರ್ದೇಶಕರಾಗಿ ಬಾಬುರಾವ್

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2020, 14:15 IST
Last Updated 3 ಡಿಸೆಂಬರ್ 2020, 14:15 IST
ಜೆಸ್ಕಾಂ ನಿರ್ದೇಶಕರಾಗಿ ನೇಮಕಗೊಂಡ ಬಾಬುರಾವ್ ಕಾರಬಾರಿ ಅವರನ್ನು ಜೀಜಾಮಾತಾ ಕನ್ಯಾ ಪ್ರೌಢಶಾಲೆ ಸಿಬ್ಬಂದಿ ಬೀದರ್‌ನಲ್ಲಿ ಬುಧವಾರ ಸನ್ಮಾನಿಸಿದರು
ಜೆಸ್ಕಾಂ ನಿರ್ದೇಶಕರಾಗಿ ನೇಮಕಗೊಂಡ ಬಾಬುರಾವ್ ಕಾರಬಾರಿ ಅವರನ್ನು ಜೀಜಾಮಾತಾ ಕನ್ಯಾ ಪ್ರೌಢಶಾಲೆ ಸಿಬ್ಬಂದಿ ಬೀದರ್‌ನಲ್ಲಿ ಬುಧವಾರ ಸನ್ಮಾನಿಸಿದರು   

ಬೀದರ್: ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಾಬುರಾವ್ ಕಾರಬಾರಿ ಜೆಸ್ಕಾಂ ನೂತನ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.

ಪಕ್ಷಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಸನ್ಮಾನ: ಜೆಸ್ಕಾಂ ನೂತನ ನಿರ್ದೇಶಕ ಕಾರಬಾರಿ ಅವರನ್ನು ಶಿವ ಛತ್ರಪತಿ ಸ್ಮಾರಕ ಸಮಿತಿ ಸಂಚಾಲಿತ ಜೀಜಾಮಾತಾ ಕನ್ಯಾ ಪ್ರೌಢಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ನಗರದಲ್ಲಿ ಬುಧವಾರ ಸನ್ಮಾನಿಸಿದರು.

ADVERTISEMENT

ಸರ್ಕಾರ ನನಗೆ ವಹಿಸಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುವೆ. ಪಕ್ಷ ಹಾಗೂ ಸರ್ಕಾರಕ್ಕೆ ಒಳ್ಳೆಯ ಹೆಸರು ತರುವ ಕೆಲಸ ಮಾಡುವೆ ಎಂದು ಬಾಬುರಾವ್ ಹೇಳಿದರು.

ಶಿವ ಛತ್ರಪತಿ ಸ್ಮಾರಕ ಸಮಿತಿಯ ಸಹ ಕಾರ್ಯದರ್ಶಿಯಾಗಿರುವ ಬಾಬುರಾವ್ ಕಾರಬಾರಿ ಅವರನ್ನು ಜೆಸ್ಕಾಂ ನಿರ್ದೇಶಕ ಹುದ್ದೆಗೆ ನೇಮಕ ಮಾಡಿರುವುದು ಸಂತಸ ತಂದಿದೆ ಎಂದು ಜೀಜಾಮಾತಾ ಕನ್ಯಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಪರಮೇಶ್ವರ ಬಿರಾದಾರ ಹೇಳಿದರು.

ಸಹ ಶಿಕ್ಷಕರಾದ ರಾಜಕುಮಾರ ಗಾದಗೆ, ಅನಿಲಕುಮಾರ ಟೆಕೋಳೆ, ಸಂಜಯ ಪಾಟೀಲ, ಆನಂದ ಜಾಧವ್, ಪ್ರಭಣ್ಣ ಕಾಳಗೊಂಡ, ನಾಗರತ್ನ ಜಮಾ ದಾರ, ಮೋಹನ್ ಜೋಶಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.