ADVERTISEMENT

ಕೊಳೆತ ಸ್ಥಿತಿಯಲ್ಲಿ ಹೆಣ್ಣು ಶಿಶುವಿನ ಶವ ಪತ್ತೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2025, 12:48 IST
Last Updated 10 ಅಕ್ಟೋಬರ್ 2025, 12:48 IST

ಔರಾದ್ (ಬೀದರ್‌ ಜಿಲ್ಲೆ): ತಾಲ್ಲೂಕಿನ ವಾಗನಗೇರಾ ಗ್ರಾಮದ ಖಾಸಗಿ ಶಾಲೆಯೊಂದರ ಆವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಹೆಣ್ಣು ಶಿಶುವಿನ ಶವ ಪತ್ತೆಯಾಗಿದೆ.

ಅಪರಿಚಿತ ಮಹಿಳೆ ತನ್ನ ಹೆರಿಗೆಯಾದ ನಂತರ ಹೆಣ್ಣು ಶಿಶುವನ್ನು ಶಾಲೆಯ ಆವರಣದ ಒಂದು ಬದಿಯಲ್ಲಿ ಬಿಟ್ಟು ಹೋಗಿದ್ದು, ಶಿಶುವಿನ ಶರೀರದ ಕೆಲ ಭಾಗ ನಾಯಿ ತಿಂದಿದ್ದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಕುರಿತು ತಾಲ್ಲೂಕು ಶಿಶು ಅಭಿವೃದ್ದಿ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಹೊಕ್ರಾಣಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶುಕ್ರವಾರ ಸ್ಥಳಕ್ಕೆ ಶಿಶು ಅಭಿವೃದ್ಧಿ ಅಧಿಕಾರಿ ಇಮಾಲಪ್ಪ ಹಾಗೂ ಹೊಕ್ರಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.