ADVERTISEMENT

ಸಿಎಎ ವಿರೋಧಿಸಿ ಪ್ರತಿಭಟನಾ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2020, 13:28 IST
Last Updated 29 ಜನವರಿ 2020, 13:28 IST
ಸಿಎಎ ವಿರುದ್ಧ ಬಹುಜನ ಕ್ರಾಂತಿ ಮೋರ್ಚಾ ಕರೆ ನೀಡಿದ್ದ ಭಾರತ ಬಂದ್ ನಿಮಿತ್ತ ಮೋರ್ಚಾದ ಪದಾಧಿಕಾರಿಗಳು ಬೀದರ್‌ನಲ್ಲಿ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು
ಸಿಎಎ ವಿರುದ್ಧ ಬಹುಜನ ಕ್ರಾಂತಿ ಮೋರ್ಚಾ ಕರೆ ನೀಡಿದ್ದ ಭಾರತ ಬಂದ್ ನಿಮಿತ್ತ ಮೋರ್ಚಾದ ಪದಾಧಿಕಾರಿಗಳು ಬೀದರ್‌ನಲ್ಲಿ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು   

ಬೀದರ್: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ), ಎನ್‍ಆರ್‌ಸಿ ಹಾಗೂ ಎನ್‌ಪಿಆರ್ ವಿರೋಧಿಸಿ ಬಹುಜನ ಕ್ರಾಂತಿ ಮೋರ್ಚಾ ಕರೆ ನೀಡಿದ್ದ ಭಾರತ ಬಂದ್ ಪ್ರಯುಕ್ತ ಮೋರ್ಚಾದ ಪದಾಧಿಕಾರಿಗಳು ನಗರದಲ್ಲಿ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷ ಸೈಯದ್ ಜುಲ್ಫೇಕಾರ್ ಹಾಸ್ಮಿ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ, ರಾಷ್ಟ್ರಪತಿಗೆ ಬರೆದ ಮನವಿಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಸಿಎಎ, ಎನ್‍ಆರ್‌ಸಿ, ಎನ್‌ಪಿಆರ್ ದೇಶ ಹಿತಕ್ಕೆ ವಿರುದ್ಧವಾಗಿವೆ. ದೇಶದ ಬಹುಜನರ ವಿರೋಧ ವ್ಯಕ್ತವಾದರೂ ಕೇಂದ್ರ ಸರ್ಕಾರ ಈ ಕಾಯ್ದೆಗಳನ್ನು ಹಿಂಪಡೆಯುತ್ತಿಲ್ಲ ಎಂದು ಆರೋಪಿಸಿದರು.

ADVERTISEMENT

ಸಿಎಎ, ಎನ್‍ಆರ್‌ಸಿ ಹಾಗೂ ಎನ್‌ಪಿಆರ್‌ಗಳನ್ನು ರದ್ದುಪಡಿಸಬೇಕು. ದೇಶದಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬದಲು ಬ್ಯಾಲೆಟ್ ಪೇಪರ್ ಬಳಸಿ ಚುನಾವಣೆ ನಡೆಸಬೇಕು. ಇತರೆ ಹಿಂದುಳಿದ ವರ್ಗಗಳ ಜಾತಿ ಆಧಾರಿತ ಜನಗಣತಿ ನಡೆಸಬೇಕು. ಜನಸಂಖ್ಯೆಯ ಆಧಾರದಲ್ಲಿ ಮೀಸಲಾತಿ ಕೊಡಬೇಕು. ಜನರ ಶಿಕ್ಷಣ ಹಾಗೂ ಆರೋಗ್ಯದ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಶೇಖ ಅನ್ಸಾರ್, ಎಂ.ಡಿ. ಗೌಸ್, ಸೈಯದ್ ಮುಬಾಶಿರ್ ಅಲಿ, ಎಂ.ಜಿ. ಖಾನಾಪೂರಕರ್, ಎಂ.ಎ. ನಬಿ,. ಉಮೇಶಕುಮಾರ ಸ್ವಾರಳ್ಳಿಕರ್, ಮುಬಾಶಿರ್ ಸಿಂದೆ, ಅಬ್ದುಲ್ ಅಲೀಮ್ ಮೊದಲಾದವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.