ADVERTISEMENT

ನೂತನ ರಾಮ ಮಂದಿರ ನಿರ್ಮಾಣ: ಬಲಬೀರ್ ಸಿಂಗ್ ₹ 5 ಲಕ್ಷ ದೇಣಿಗೆ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2021, 15:41 IST
Last Updated 17 ಫೆಬ್ರುವರಿ 2021, 15:41 IST
ಅಯೋಧ್ಯೆಯಲ್ಲಿ ನೂತನ ರಾಮ ಮಂದಿರ ನಿರ್ಮಾಣಕ್ಕೆ ಗುರುನಾನಕ ಝೀರಾ ಫೌಂಡೇಶನ್ ಅಧ್ಯಕ್ಷ ಸರ್ದಾರ್ ಬಲಬೀರ್ ಸಿಂಗ್ ಅವರು ಬೀದರ್‌ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ಹಣಮಂತರಾವ್ ಪಾಟೀಲ ಅವರಿಗೆ ₹ 5 ಲಕ್ಷ ಮೊತ್ತದ ದೇಣಿಗೆಯ ಚೆಕ್ ಹಸ್ತಾಂತರಿಸಿದರು

ಬೀದರ್: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ನೂತನ ರಾಮ ಮಂದಿರಕ್ಕೆ ಇಲ್ಲಿಯ ಗುರುನಾನಕ ಝೀರಾ ಫೌಂಡೇಶನ್ ಅಧ್ಯಕ್ಷ ಸರ್ದಾರ್ ಬಲಬೀರ್ ಸಿಂಗ್ ₹5 ಲಕ್ಷ ದೇಣಿಗೆ ನೀಡಿದ್ದಾರೆ.

ನಗರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ಹಣಮಂತರಾವ್ ಪಾಟೀಲ ಅವರಿಗೆ ದೇಣಿಗೆ ಮೊತ್ತದ ಚೆಕ್ ನೀಡಿದರು.

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಕೊಡುವುದು ಪವಿತ್ರ ಕೆಲಸ. ಪ್ರತಿಯೊಬ್ಬರು ಸ್ವಯಂ ಪ್ರೇರಣೆಯಿಂದ ದೇಣಿಗೆ ಕೊಡಬೇಕು ಎಂದು ಮುಖಂಡ ಪ್ರಕಾಶ ಟೊಣ್ಣೆ ಮನವಿ ಮಾಡಿದರು.

ADVERTISEMENT

ನಿವೃತ್ತ ಪ್ರಾಚಾರ್ಯ ಎಸ್.ಬಿ. ಸಜ್ಜನಶೆಟ್ಟಿ, ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಪ್ರತಿಭಾ ಚಾಮಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.