ADVERTISEMENT

ಭಾಲ್ಕಿ | ಅಮೃತ ಮಹೋತ್ಸವಕ್ಕೆ ಧರ್ಮಾಧಿಕಾರಿ ಹೆಗ್ಗಡೆಗೆ ಆಹ್ವಾನ

​ಪ್ರಜಾವಾಣಿ ವಾರ್ತೆ
Published 6 ಜನವರಿ 2026, 4:16 IST
Last Updated 6 ಜನವರಿ 2026, 4:16 IST
ಭಾಲ್ಕಿಯ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಗೌರವಿಸಿ ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಸಮಾರಂಭಕ್ಕೆ ಆಹ್ವಾನಿಸಿದರು
ಭಾಲ್ಕಿಯ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಗೌರವಿಸಿ ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಸಮಾರಂಭಕ್ಕೆ ಆಹ್ವಾನಿಸಿದರು   

ಭಾಲ್ಕಿ: ಪಟ್ಟಣದಲ್ಲಿ 2026ರ ಏಪ್ರಿಲ್ ತಿಂಗಳಿನಲ್ಲಿ ನಡೆಯಲಿರುವ ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಸಮಾರಂಭಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಆಹ್ವಾನಿಸಲಾಗಿದೆ.

ಧರ್ಮಸ್ಥಳಕ್ಕೆ ಸೋಮವಾರ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಭೇಟಿ ನೀಡಿ ಧರ್ಮಾಧಿಕಾರಿಯನ್ನು ಗೌರವಿಸಿ ಪೂಜ್ಯರ ಅಮೃತ ಮಹೋತ್ಸವ ಸಮಾರಂಭಕ್ಕೆ ಆಹ್ವಾನ ನೀಡಿದರು.

ಗಡಿಭಾಗದಲ್ಲಿ ಕಳೆದ ನಾಲ್ಕು ದಶಕಗಳಿಂದ ಬಸವಲಿಂಗ ಪಟ್ಟದ್ದೇವರು ದಣಿವರಿಯದ ಸೇವೆ ಸಲ್ಲಿಸುತ್ತಿದ್ದಾರೆ. ಧರ್ಮ ಪ್ರಸಾರದ ಜತೆಗೆ ವಿದ್ಯಾ ಸಂಸ್ಥೆ ತೆರೆದು ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿಗೈಯುತ್ತಿದ್ದಾರೆ. ಅಂತಹ ಪೂಜ್ಯರು 75ನೇ ವಸಂತಕ್ಕೆ ಕಾಲಿರಿಸಿದ್ದು ಅವರ ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಭಕ್ತ ವಲಯ ನಿರ್ಧಾರ ಕೈಗೊಂಡಿದೆ. ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸುವಂತೆ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮನವಿ ಮಾಡಿದರು.

ADVERTISEMENT

ಸುರತ್ಕಲ್ ಎನ್‍ಐಟಿ ಕಂಪ್ಯೂಟರ್ ವಿಭಾಗದ ಪ್ರಾಧ್ಯಾಪಕ ವಿಜಯಕುಮಾರ ಘೋದೆ, ಚನ್ನಬಸವೇಶ್ವರ ಗುರುಕುಲದ ಹಳೆಯ ವಿದ್ಯಾರ್ಥಿ ಆಶಿಶ್ ಮೊಳಕೀರೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.