ADVERTISEMENT

ಪಟ್ಟದ್ದೇವರ ಸಮಾಜಮುಖಿ ಕಾರ್ಯಗಳು ಇಂದಿಗೂ ಮಾದರಿ

ಮೋರ್ಗಿಯಲ್ಲಿ ಪಟ್ಟದ್ದೇವರ ಮೂರ್ತಿ ಅನಾವರಣ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2020, 10:22 IST
Last Updated 3 ಫೆಬ್ರುವರಿ 2020, 10:22 IST
ತೆಲಂಗಾಣದ ಮೋರ್ಗಿ ಗ್ರಾಮದ ಭಾಲ್ಕಿ ಹಿರೇಮಠ ಸಂಸ್ಥಾನದ ಶಾಖಾ ಮಠದಲ್ಲಿ ಬಸವಣ್ಣನವರ, ಕಮಳೇಶ್ವರ ಮತ್ತು ಡಾ.ಚನ್ನಬಸವ ಪಟ್ಟದ್ದೇವರ ಮೂರ್ತಿ ಅನಾವರಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಈಶ್ವರ ಖಂಡ್ರೆ ಮಾತನಾಡಿದರು
ತೆಲಂಗಾಣದ ಮೋರ್ಗಿ ಗ್ರಾಮದ ಭಾಲ್ಕಿ ಹಿರೇಮಠ ಸಂಸ್ಥಾನದ ಶಾಖಾ ಮಠದಲ್ಲಿ ಬಸವಣ್ಣನವರ, ಕಮಳೇಶ್ವರ ಮತ್ತು ಡಾ.ಚನ್ನಬಸವ ಪಟ್ಟದ್ದೇವರ ಮೂರ್ತಿ ಅನಾವರಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಈಶ್ವರ ಖಂಡ್ರೆ ಮಾತನಾಡಿದರು   

ಭಾಲ್ಕಿ: ಗಡಿ ಭಾಗದಲ್ಲಿ ಡಾ.ಚನ್ನಬಸವ ಪಟ್ಟದ್ದೇವರು ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕಾರ್ಯಗಳನ್ನು ಮಾಡುವ ಮೂಲಕ ವಿಶಿಷ್ಟವಾಗಿ ಗುರುತಿಸಿಕೊಂಡಿದ್ದಾರೆ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು. ‌

ತೆಲಂಗಾಣ ರಾಜ್ಯದ ಸಂಗಾರೆಡ್ಡಿ ಜಿಲ್ಲೆಯ ನಾರಾಯಣ ಖೇಡ್ ತಾಲ್ಲೂಕಿನ ಮೋರ್ಗಿ ಗ್ರಾಮದ ಭಾಲ್ಕಿ ಹಿರೇಮಠ ಸಂಸ್ಥಾನದ ಶಾಖಾ ಮಠದಲ್ಲಿ ಭಾನುವಾರ ಆಯೋಜಿಸಿದ್ದ ಕಮಳೇಶ್ವರ ಮಠದ ನೂತನ ಕಟ್ಟಡ ಉದ್ಘಾಟನೆ, ಬಸವಣ್ಣನವರ, ಕಮಳೇಶ್ವರ ಮತ್ತು ಡಾ.ಚನ್ನಬಸವ ಪಟ್ಟದ್ದೇವರ ಮೂರ್ತಿ ಅನಾವರಣಗೊಳಿಸಿ ಅವರು ಮಾತನಾಡಿದರು.

ಪಟ್ಟದ್ದೇವರು 1936ರಲ್ಲಿ ಮೋರ್ಗಿಯಲ್ಲಿ ಆರಂಭಿಸಿದ ಶಾಂತಿವರ್ಧಕ ಶಿಕ್ಷಣ ಇಂದು ಹೆಮ್ಮರವಾಗಿ ಬೆಳೆದಿದೆ. ಶಾಂತಿವರ್ಧಕ ಶಿಕ್ಷಣ ಸಂಸ್ಥೆ ಬಡ ವಿದ್ಯಾರ್ಥಿಗಳಿಗೆ ವರದಾನವಾಗಿ ಪರಿಣಮಿಸಿದೆ. ಇಲ್ಲಿ ಕಲಿತ ಸಾವಿರಾರೂ ವಿದ್ಯಾರ್ಥಿಗಳು ದೇಶ-ವಿದೇಶಗಳಲ್ಲಿ ಉನ್ನತ ಸ್ಥಾನ ಅಲಂಕರಿಸಿದ್ದಾರೆ. ಅಂತಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷನಾಗಿ ನಾನು ಕಾರ್ಯ ನಿರ್ವಹಿಸುತ್ತಿರುವುದು ಹೆಮ್ಮೆ ಎನಿಸುತ್ತದೆ ಎಂದರು.

ADVERTISEMENT

ಪಟ್ಟದ್ದೇವರು ತಮ್ಮ ಜೀವಿತಾವಧಿಯಲ್ಲಿ ಕೈಗೊಂಡ ಜನಪರ ಕಾರ್ಯಗಳಿಂದ ಸಂಸ್ಥಾನದ ಗೌರವ ಹೆಚ್ಚಾಗಿದೆ ಎಂದರು.

ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಬಸವಣ್ಣನವರ ವಿಚಾರ ಧಾರೆ ಮೈಗೂಡಿಸಿಕೊಂಡು ನಿಜ ಜೀವನದಲ್ಲಿ ಆಚರಣೆಗೆ ತಂದವರಲ್ಲಿ ಪಟ್ಟದ್ದೇವರು. ಅವರ ಆಶೀರ್ವಾದದಿಂದ ಮಠದ ಎಲ್ಲ ಕೆಲಸ ಯಶಸ್ವಿಯಾಗಿ ನಡೆಯುತ್ತಿದೆ ಎಂದು ತಿಳಿಸಿದರು.

ಗುರುಬಸವ ಪಟ್ಟದ್ದೇವರು, ಕಾವಲಗಾ ಷಣ್ಮುಖ ಶಿವಯೋಗಿ ವಿರಕ್ತ ಮಠದ ಷಣ್ಮುಖ ಸ್ವಾಮೀಜಿ, ಸಿದ್ಧರಾಮೇಶ್ವರ ಪಟ್ಟದ್ದೇವರು, ಬಸವಕಲ್ಯಾಣ ಅನುಭವ ಮಂಟಪದ ಸಚ್ಚಿದಾನಂದ ಸ್ವಾಮೀಜಿ, ಶಿವಪ್ರಸಾದ ದೇವರು, ಜಯದೇವ ಸ್ವಾಮೀಜಿ, ಬಸವಲಿಂಗ ಸ್ವಾಮೀಜಿ, ಮೈತ್ರಾದೇವಿ ತಾಯಿ, ಮಹಾದೇವಮ್ಮತಾಯಿ ಸಮ್ಮುಖ ವಹಿಸಿದ್ದರು.

ನಿವೃತ್ತ ಎಂಜಿನಿಯರ್‌ ಪಿ.ಸಂಗಪ್ಪ ಬಸವ ಗುರುವಿನ ಪೂಜೆ ನೆರವೇರಿಸಿದರು. ಮಾಜಿ ಸಂಸದ ಸುರೇಶ ಶೆಟಕಾರ್, ರಾಜು ರಾಠೋಡ್, ಕೀರ್ತಿ ನಂದುಪಟೇಲ್, ಬಿ.ಅಶೋಕ, ವಿಶ್ವನಾಥಪ್ಪ ಬಿರಾದಾರ ಇದ್ದರು.

ಸುನಿಲ್ ಮಾಳಗೆ ಸ್ವಾಗತಿಸಿದರು. ಬಸವರಾಜ ಮೂಲಗೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.