ಭಾಲ್ಕಿ (ಬೀದರ್ ಜಿಲ್ಲೆ): ಪಟ್ಟಣದಲ್ಲಿ 2026ರ ಏ.20 ರಿಂದ 22 ರ ವರೆಗೆ ಆಚರಿಸಲು ಉದ್ದೇಶಿಸಿರುವ ಭಾಲ್ಕಿ ಹಿರೇಮಠದ ಹಿರಿಯ ಸ್ವಾಮೀಜಿ, ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಸಮಾರೋಪ ಸಮಾರಂಭಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲಾಗಿದೆ.
ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಬಸವಣ್ಣನವರ ಭಾವಚಿತ್ರ ನೀಡಿ
ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಬಸವತತ್ವ ಮತ್ತು ಸಮಾಜ ಸೇವೆಗೆ ಬದುಕು ಮುಡಿಪಾಗಿಟ್ಟಿರುವ ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಸಮಾರಂಭಕ್ಕೆ ರಾಷ್ಟ್ರಪತಿ ಅವರನ್ನು ಆಹ್ವಾನಿಸಿದ್ದೇವೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಗುರುಬಸವ ಪಟ್ಟದ್ದೇವರು ತಿಳಿಸಿದ್ದಾರೆ.
ಸಂಸದ ಸಾಗರ್ ಖಂಡ್ರೆ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.