ಬೀದರ್: ‘ನಾವು ನಿರೀಕ್ಷೆ ಮಾಡಿದಂತೆ ನಮಗೆ ಫಲಿತಾಂಶ ಬಂದಿಲ್ಲ. ಆದರೆ, ಜೆಡಿಎಸ್– ಬಿಜೆಪಿ ಮೈತ್ರಿ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಆಯ್ಕೆ ಮಾಡಿರುವುದು ಖುಷಿ ತಂದಿದೆ. ಮತದಾರರ ತೀರ್ಪನ್ನು ಸ್ವಾಗತಿಸುತ್ತೇನೆ’ ಎಂದು ಜೆಡಿಎಸ್ ಮುಖಂಡರೂ ಆದ ಮಾಜಿಸಚಿವ ಬಂಡೆಪ್ಪ ಕಾಶೆಂಪುರ್ ತಿಳಿಸಿದ್ದಾರೆ.
ಎನ್‌ಡಿಎ ಅಭ್ಯರ್ಥಿಗಳ ಪರ ಮತ ಚಲಾಯಿಸಿದ ಮತದಾರರಿಗೆ, ಜೆಡಿಎಸ್, ಬಿಜೆಪಿ ಮುಖಂಡರಿಗೆ, ಕಾರ್ಯಕರ್ತರಿಗೆ ಧನ್ಯವಾದ ತಿಳಿಸುವೆ ಎಂದು ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.