ADVERTISEMENT

ನಗರಸಭೆ ಚುನಾವಣೆ ಮುಂದೂಡಿ: ಬಂಡೆಪ್ಪ

ಶಾಸಕ ಬಂಡೆಪ್ಪ ಕಾಶೆಂಪೂರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2021, 3:11 IST
Last Updated 10 ಏಪ್ರಿಲ್ 2021, 3:11 IST
ಬಂಡೆಪ್ಪ ಕಾಶೆಂಪೂರ
ಬಂಡೆಪ್ಪ ಕಾಶೆಂಪೂರ   

ಬೀದರ್: ‘ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಬೀದರ್ ನಗರಸಭೆ ಚುನಾವಣೆಯನ್ನು ಮುಂದೂಡಬೇಕು’ ಎಂದು ಶಾಸಕ ಬಂಡೆಪ್ಪ ಕಾಶೆಂಪೂರ ಒತ್ತಾಯಿಸಿದ್ದಾರೆ.

ಜಿಲ್ಲೆಯಲ್ಲಿ ನಿತ್ಯ ಸರಾಸರಿ 250 ಪ್ರಕರಣಗಳು ವರದಿಯಾಗುತ್ತಿವೆ. ಇಂಥ ಪರಿಸ್ಥಿತಿಯಲ್ಲಿ ನಗರಸಭೆ ಚುನಾವಣೆ ನಡೆಸುವುದು ಸೂಕ್ತವಲ್ಲ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಚುನಾವಣೆ ಮುಂದೂಡಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT