
ಪ್ರತಿಭಟನೆ ನಡೆಸಿದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳ
ಬೀದರ್: ಬಾಂಗ್ಲಾ ದೇಶದಲ್ಲಿ ಹಿಂದೂ ಯುವಕ ದೀಪು ಚಂದ್ರ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದಿಂದ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಹಿಂದೂಗಳಿಗೆ ರಕ್ಷಣೆ ಕೊಡದ ಬಾಂಗ್ಲಾದೇಶದ ವಿರುದ್ಧ ಘೋಷಣೆ ಕೂಗಿದರು. ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲಿನ ಅತ್ಯಾಚಾರ ಸಹಿಸುವುದಿಲ್ಲ. ಸಾರ್ವಜನಿಕವಾಗಿ ಹಿಂದೂ ಯುವಕನ ಹತ್ಯೆ ಮಾಡಿರುವುದು ತೀವ್ರ ಖಂಡನಾರ್ಹ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ವೀರಶೆಟ್ಟಿ ಖ್ಯಾಮ ಹೇಳಿದರು.
ಕೇಂದ್ರ ಸರ್ಕಾರ ತಕ್ಷಣವೇ ಬಾಂಗ್ಲಾದೇಶದಲ್ಲಿರುವ ಹಿಂದೂಗಳ ರಕ್ಷಣೆಯನ್ನು ಖಾತ್ರಿ ಪಡಿಸಬೇಕು ಎಂದು ಒತ್ತಾಯಿಸಿದರು.
ಪಾಲಿಕೆ ಸದಸ್ಯ ಶಶಿಧರ ಹೊಸಳ್ಳಿ, ಬಸವರಾಜ ಯದಲಾಪೂರ, ಭೀಮಣ್ಣ ಸರೋಳ್ಳಿ, ಸಂಗು ಪಾಟೀಲ್, ದತ್ತಾತ್ರಿ ವಾಲ್ದೊಡ್ಡಿ, ಬೀರಪ್ಪ ಹಿಪ್ಪಳಗಾಂವ್, ಸಾಯಿ ಮೂಲಗೆ, ನಿಖಿಲ್, ಶಂಕರ್ ಖ್ಯಾಮ, ಸಂತೋಷ್ ಬಂಡೆ, ಸದಾನಂದ ಹುಮನಾಬಾದ್, ಅನಂತರೆಡ್ಡಿ, ರೋಹಿತ್ ಗುರೂಜಿ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.