ADVERTISEMENT

₹1.29 ಲಕ್ಷ ಮೌಲ್ಯದ ನಿಷೇಧಿತ ಔಷಧಿ ಜಪ್ತಿ: ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2026, 7:45 IST
Last Updated 4 ಮಾರ್ಚ್ 2026, 7:45 IST
ಬೀದರ್‌ ನಗರದ ಶಾಹಾಪುರ ಬಳಿಯ ಮಾರುಕಟ್ಟೆ ಪೊಲೀಸ್ ಠಾಣೆಯ ಪೊಲೀಸರು ಜಪ್ತಿ ಮಾಡಿದ ನಿಷೇಧಿತ ಕಾಫ್ ಔಷಧಿ 
ಬೀದರ್‌ ನಗರದ ಶಾಹಾಪುರ ಬಳಿಯ ಮಾರುಕಟ್ಟೆ ಪೊಲೀಸ್ ಠಾಣೆಯ ಪೊಲೀಸರು ಜಪ್ತಿ ಮಾಡಿದ ನಿಷೇಧಿತ ಕಾಫ್ ಔಷಧಿ    

ಬೀದರ್: ಜಿಲ್ಲಾ ಪೊಲೀಸ್ ವ್ಯಾಪ್ತಿಯ ಮಾರುಕಟ್ಟೆ ಪೊಲೀಸ್ ಠಾಣೆಯ ಪೊಲೀಸರು ನಡೆಸಿದ ದಾಳಿಯಲ್ಲಿ ₹1.29 ಲಕ್ಷ ಮೌಲ್ಯದ ಮಾದಕ ಅಂಶ ಹೊಂದಿದ ಕೆಮ್ಮಿನ ಸಿರಪ್, ಮಾತ್ರೆ ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ.

ಮಾ.2ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಶಾಹಾಪುರ ಗ್ರಾಮದ ಸಮೀಪ ಪ್ಲಾಸ್ಟಿಕ್ ಚೀಲಗಳಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತು. ತಕ್ಷಣ ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದು ತಪಾಸಣೆ ನಡೆಸಲಾಗಿದೆ.

ಆರೋಪಿಗಳಿಂದ 100 ಮಿ.ಲೀ ಪ್ರಮಾಣದ ‘ಸೆಂಕುಫ್’ ಕೆಮ್ಮಿನ ಸಿರಪ್‌ನ 100 ಬಾಟಲಿ (₹17,200), ‘ಪೀವೋನ್ ಸ್ಪಾಸ್ ಪ್ಲಸ್ 375 ಮಿ.ಗ್ರಾಂ’ ಎಂಬ 19 ಪೆಟ್ಟಿಗೆಗಳಲ್ಲಿ ಒಟ್ಟು 2,160 ಮಾತ್ರೆ (₹42,311), ಎರಡು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ.

ADVERTISEMENT

ಈ ಸಂಬಂಧ ಪ್ರಕರಣ ದಾಖಲಿಸಿ ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಪ್ರದೀಪ್ ಗುಂಟಿ ಮಾರ್ಗದರ್ಶನ ನೀಡಿದ್ದರು. ಯಶಸ್ವಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಅವರು ಅಭಿನಂದಿಸಿದ್ದಾರೆ.

ನಿಷೇಧಿತ ಮಾದಕ ವಸ್ತುಗಳ ಅಕ್ರಮ ಸಾಗಣೆ ಮತ್ತು ಮಾರಾಟದಲ್ಲಿ ತೊಡಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.