ADVERTISEMENT

ನೀತಿ ಸಂಹಿತೆ ಜಾರಿ: ಕಟೌಟ್ ತೆರವು

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2023, 12:39 IST
Last Updated 29 ಮಾರ್ಚ್ 2023, 12:39 IST
ಚುನಾವಣೆ ನೀತಿ ಸಂಹಿತೆ ಜಾರಿಯಾದ ಕಾರಣ ಔರಾದ್ ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿನ ಫ್ಲೆಕ್ಸ್‌ ತೆರವು ಮಾಡಲಾಯಿತು
ಚುನಾವಣೆ ನೀತಿ ಸಂಹಿತೆ ಜಾರಿಯಾದ ಕಾರಣ ಔರಾದ್ ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿನ ಫ್ಲೆಕ್ಸ್‌ ತೆರವು ಮಾಡಲಾಯಿತು   

ಔರಾದ್: ವಿಧಾನಸಭಾ ಚುನಾವಣೆ ಘೋಷಣೆಯಾಗಿ ಬುಧವಾರದಿಂದ ನೀತಿ ಸಂಹಿತೆ ಜಾರಿಯಾದ ಕಾರಣ ಬುಧವಾರ ಪಟ್ಟಣದ ವಿವಿಧೆಡೆ ಸರ್ಕಾರಿ ಹಾಗೂ ರಾಜಕಾರಣಿಗಳ ಬ್ಯಾನರ್‌ಗಳನ್ನು ತೆರವು ಮಾಡಲಾಯಿತು.

ಪಟ್ಟಣದ ಉದಗೀರ್ ರಸ್ತೆಯಲ್ಲಿ ಅಹಿಲ್ಯಾಬಾಯಿ ಹೋಳ್ಕರ್ ಸಮುದಾಯ ಭವನದ ಭೂಮಿ‌ಪೂಜೆ ಕಾರ್ಯಕ್ರಮದ ವೇದಿಕೆ ಸುತ್ತ ಹಾಕಲಾದ ರಾಜಕಾಣಿಗಳ ಭಾವಚಿತ್ರದ ಬ್ಯಾನರ್‌ಗಳನ್ನು ತೆರವು ಮಾಡಲಾಯಿತು.

ನೀತಿ ಸಂಹಿತೆ ಕಾರಣಕ್ಕೆ ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಈ ಭೂಮಿಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿಲ್ಲ. ಪೊಲೀಸರು ವೇದಿಕೆ ಬಳಿ ಬಂದು ತಪಾಸಣೆ ನಡೆಸಿದರು. ಇದು ರಾಜಕೀಯ ಕಾರ್ಯಕ್ರಮ ಅಲ್ಲ ಸಮಾಜದ ಧಾರ್ಮಿಕ ಕಾರ್ಯಕ್ರಮ ಎಂದು ಸಂಘಟಕರು ಪೊಲೀಸರಿಗೆ ಮನವರಿಕೆ ಮಾಡಿದರು. ಸಮಾಜದ ಮುಖಂಡರು ಸೇರಿ ಕಾರ್ಯಕ್ರಮ ಮಾಡಿ ಮುಗಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.