ಬೀದರ್: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಬಸವಪರ ಸಂಘಟನೆಗಳು ಹಾಗೂ ಬಸವ ಸಂಸ್ಕೃತಿ ಅಭಿಯಾನ ಸಮಿತಿ ಸಹಯೋಗದಲ್ಲಿ ನಗರದ ಬಿ.ವಿ. ಭೂಮರಡ್ಡಿ ಕಾಲೇಜು ಮೈದಾನದಲ್ಲಿ ಬುಧವಾರ (ಸೆ.3) ಹಮ್ಮಿಕೊಂಡಿರುವ ಬಸವ ಸಂಸ್ಕೃತಿ ಅಭಿಯಾನಕ್ಕೆ ಸಿದ್ಧತೆ ಪೂರ್ಣಗೊಂಡಿದೆ.
ಬಿವಿ ಭೂಮರಡ್ಡಿ ಕಾಲೇಜು ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣ, ಆಸನಗಳ ವ್ಯವಸ್ಥೆ ಕಾರ್ಯ ಮಂಗಳವಾರ ಸಂಜೆ ಬಹುತೇಕ ಪೂರ್ಣಗೊಂಡಿತ್ತು. ವಾಹನಗಳ ನಿಲುಗಡೆ, ಅನ್ನ ದಾಸೋಹಕ್ಕೆ ಜಾಗ ಗುರುತಿಸಿ, ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಾಲೇಜು ಎದುರಿನ ಮುಖ್ಯ ಪ್ರವೇಶ ದ್ವಾರದಲ್ಲಿ ಕಟೌಟ್ ಹಾಕಲಾಗಿದೆ.
ಬುಧವಾರ ಬೆಳಿಗ್ಗೆ 11ಕ್ಕೆ ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ವಚನ ಸಂವಾದ ಜರುಗಲಿದೆ. ರಾಜ್ಯದ ವಿವಿಧ ಭಾಗದ ಮಠಾಧೀಶರು ಇದರಲ್ಲಿ ಪಾಲ್ಗೊಳ್ಳುವರು. ಸಂಜೆ 4ಕ್ಕೆ ಬಸವೇಶ್ವರ ವೃತ್ತದಿಂದ ಮೆರವಣಿಗೆ ಆರಂಭವಾಗಲಿದೆ. ಸಂಜೆ 6ಕ್ಕೆ ವೇದಿಕೆ ಕಾರ್ಯಕ್ರಮ ಜರುಗಲಿದೆ. ಈಗಾಗಲೇ ಮೆರವಣಿಗೆಗೆ ಅಗತ್ಯ ಸಿದ್ಧತೆ ಮಾಡಲಾಗಿದ್ದು, ಬಸವೇಶ್ವರ ಪುತ್ಥಳಿ, ಭಾವಚಿತ್ರಗಳ ಮೆರವಣಿಗೆ, ಬಸವ ಸಂಸ್ಕೃತಿ ಪ್ರಸಾರಕ್ಕಾಗಿ ಶ್ರಮಿಸಿದವರ ಭಾವಚಿತ್ರಗಳು ಮೆರವಣಿಗೆಯಲ್ಲಿ ರಾರಾಜಿಸಲಿವೆ ಎಂದು ಅಭಿಯಾನ ಸಮಿತಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.